ಸೊರಬ ಚಂದ್ರಗುತ್ತಿ ಸಮೀಪದ ಹೊರಬೈಲು ಗ್ರಾಮದಲ್ಲಿ ಸರ್ಕಾರಿ ಬಸ್ ಸಂಚಾರಕ್ಕೆ ತಾಪಂ ಮಾಜಿ ಸದಸ್ಯ ಸುನೀಲ್ ಗೌಡ ಗ್ರಾಮಸ್ಥರ ಸಮ್ಮುಖದಲ್ಲಿ ಚಾಲನೆ ನೀಡಿದರು. ರವಿ ಹೊರಬೈಲು, ಅಶೋಕ್ ಗೌಡ, ಹಾಲಮ್ಮ ಇತರರಿದ್ದರು.
ಸೊರಬ: ತಾಲೂಕಿನ ಚಂದ್ರಗುತ್ತಿ ಹೋಬಳಿಯ ಹೊರಬೈಲು ಗ್ರಾಮದಲ್ಲಿ ಸರ್ಕಾರಿ ಬಸ್ ಸಂಚಾರಕ್ಕೆ ತಾಪಂ ಮಾಜಿ ಸದಸ್ಯ ಸುನೀಲ್ ಗೌಡ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರ ಆದೇಶ ಮತ್ತು ಮುತುವರ್ಜಿಯಿಂದ ಬಸ್ ಸೌಲಭ್ಯ ದೊರೆತಿದೆ. ಇದರಿಂದ ವಿದ್ಯಾರ್ಥಿಗಳು ಮತ್ತು ಕೂಲಿ ಕಾರ್ಮಿಕರಿಗೆ ಅನುಕೂಲವಾಗಿದೆ. ಈ ಭಾಗದಿಂದ ಶಿರಸಿ ಭಾಗಕ್ಕೆ ವಿದ್ಯಾಭ್ಯಾಸಕ್ಕಾಗಿ ನೂರಾರು ವಿದ್ಯಾರ್ಥಿಗಳು ತೆರಳುತ್ತಾರೆ. ಇದಕ್ಕೆ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರೂ ಸಹ ಸಹಕರಿಸಿದ್ದಾರೆ ಎಂದು ತಿಳಿಸಿದರು.
ಹೊರಬೈಲು ಗ್ರಾಮದಿಂದ ವಿದ್ಯಾನಗರ, ಹರೀಶಿ, ಶಿರಸಿ ಭಾಗಕ್ಕೆ ಬಸ್ ಸೌಲಭ್ಯಕ್ಕಾಗಿ ಸಾರ್ವಜನಿಕರಿಂದ ಒತ್ತಾಯವಿತ್ತು. ಬಸ್ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಸ್ಥಳೀಯರು ಪಟಾಕಿ ಸಿಡಿಸಿ, ಸಿಹಿ ವಿತರಿಸುವ ಜತೆಗೆ ಬಸ್‌ಗೆ ಪೂಜೆ ಸಲ್ಲಿಸಿ ಸಂಭ್ರಮಿಸಿದರು.