ಬಿವೈಆರ್ ಕ್ರಿಯಾಶೀಲ ಸಂಸದ | Raghavendra birthday

ಶಿಕಾರಿಪುರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ, ಆರಗ ಜ್ಞಾನೇಂದ್ರ, ಬಿ.ಸಿ.ಪಾಟೀಲ್ ಇತರರಿದ್ದರು.
ಶಿಕಾರಿಪುರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ, ಆರಗ ಜ್ಞಾನೇಂದ್ರ, ಬಿ.ಸಿ.ಪಾಟೀಲ್ ಇತರರಿದ್ದರು.
Published on
ಶಿಕಾರಿಪುರ: ಜನಸೇವೆ, ಅಭಿವೃದ್ಧಿ ಕಾರ್ಯಗಳೆಂದರೆ ಬಿ.ವೈ.ರಾಘವೇಂದ್ರ ಅವರಿಗೆ ಒಂದು ರೀತಿಯ ಯುದ್ಧೋನ್ಮಾದ. ಜನಪರ ಕಾರ್ಯಗಳಲ್ಲಿ ಹಿಂದೆ ಸರಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಪಟ್ಟಣದಲ್ಲಿ ಶನಿವಾರ ಅಭಿಮಾನಿಗಳ ಆಯೋಜಿಸಿದ್ದ ಸಂಸದ ಬಿ.ವೈ.ರಾಘವೇಂದ್ರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಘಣ್ಣ ಅವರದು ಚಲನಶೀಲ ವ್ಯಕ್ತಿತ್ವ. ಪ್ರತಿ ಹಳ್ಳಿಯನ್ನೂ ಸಂಪರ್ಕಿಸಿ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ ಎಂದರು.
ಎಂದಿಗೂ ಅಧಿಕಾರವನ್ನು ವೈಯಕ್ತಿಕ ಲಾಭಕ್ಕೆ ಬಳಸಿಕೊಂಡವರಲ್ಲ. ಜನರ ಕಷ್ಟಗಳಿಗೆ ಸ್ಪಂದಿಸುವ ಗುಣ ಅವರದು. ಶಿವಮೊಗ್ಗ ವಿಮಾನ ನಿಲ್ದಾಣ, ಮೇಲ್ಸೇತುವೆಗಳು, ರೈಲ್ವೆ ಯೋಜನೆಗಳು ಹಾಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಲ್ಲಿ ಅವರ ಶ್ರಮ ಅಪಾರ ಎಂದು ಬಣ್ಣಿಸಿದರು.
ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ರಾಘವೇಂದ್ರ ಅವರ ದೂರದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆ ಅಭಿವೃದ್ಧಿಯಲ್ಲಿ ಇಂದು ರಾಜ್ಯದಲ್ಲೇ ಮಾದರಿಯಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಕ್ಷೇತ್ರಕ್ಕೆ ತರುವಲ್ಲಿ ಅವರು ಸದಾ ಸಕ್ರಿಯ. ಮಲೆನಾಡಿನ ರೈತರ, ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಚರ್ಚಿಸುವ ಮೂಲಕ ಪರಿಹಾರಕ್ಕೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದರು.
ಮಾಜಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ರಾಘಣ್ಣ ಮತ್ತು ವಿಜಯಣ್ಣ ಅವರಿಗೆ ಅವರ ತಂದೆಯವರಂತೆ ಜನಸೇವೆ ಎಂದರೆ ಉತ್ಸಾಹ. ಜನಪರ ಕಾರ್ಯಗಳು ನಮ್ಮನ್ನು ಸದಾ ಜನತೆಯ ಹೃದಯದಲ್ಲಿ ಸ್ಥಾನ ಕಲ್ಪಿಸುತ್ತವೆ ಎಂದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ನನಗೆ ಸದಾ ಮಾಜಿ ಪ್ರಧಾನಿ ಅಟಲ್ ಜೀ, ಹಾಲಿ ಪ್ರಧಾನಿ ನರೇಂದ್ರ ಮೋದಿಜಿ ಹಾಗೂ ನನ್ನ ತಂದೆ ಬಿ.ಎಸ್.ಯಡಿಯೂರಪ್ಪ ನನಗೆ ಸದಾ ಸ್ಫೂರ್ತಿ ಹಾಗೂ ಮಾದರಿ. ಮಾನವೀಯ ಮೌಲ್ಯ, ಅವಿಶ್ರಾಂತವಾಗಿ ಕಾರ್ಯಕ್ಷೇತ್ರದಲ್ಲಿ ತೊಡಗುವ ಸಂಕಲ್ಪ ನನಗೆ ಸದಾ ಮಾರ್ಗದರ್ಶಿ ಎಂದು ಹೇಳಿದರು
ಶಾಸಕ ಬಿ.ವೈ.ವಿಜಯೇಂದ್ರ, ಎಂಎಡಿಬಿ ಮಾಜಿ ಅಧ್ಯಕ್ಷರಾದ ಕೆ.ಎಸ್.ಗುರುಮೂರ್ತಿ, ಎ.ಎಸ್.ಪದ್ಮನಾಭ ಭಟ್, ಬಿಜೆಪಿ ಮಂಡಲ ಅಧ್ಯಕ್ಷ ಹನುಮಂತಪ್ಪ, ಅಭಿಮಾನಿಗಳು, ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net