29ರಂದು ಸಾಗರ ಬಂದ್‌ಗೆ ಕರೆ | Farmer pressmeet

ದಿನೇಶ್ ಶಿರವಾಳ
ದಿನೇಶ್ ಶಿರವಾಳ
Published on
ಸಾಗರ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಜೂ.28ರಂದು ರಾಷ್ಟಭಕ್ತರ ಬಳಗ, ಪರಿಸರ ಆಸಕ್ತರು ಹಮ್ಮಿಕೊಂಡ ಪ್ರತಿಭಟನೆಗೆ ರೈತ ಸಂಘ ಸಂಪೂರ್ಣ ಬೆಂಬಲ ನೀಡುತ್ತಿದೆ. ಜತೆಗೆ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಜೂ.29ರಂದು ಸ್ವಯಂಪ್ರೇರಿತ ಸಾಗರ ಬಂದ್ ಮಾಡಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಹೇಳಿದರು.
ಶರಾವತಿ ಪಂಪ್ಡ್ೃ ಸ್ಟೋರೇಜ್ ಯೋಜನೆ ಕೈಬಿಡಲು ರೈತ ಸಂಘ ನಿರಂತರ ಹೋರಾಟ ನಡೆಸಿದೆ. ಇದೀಗ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನೇತೃತ್ವದ ರಾಷ್ಟ್ರಭಕ್ತರ ಬಳಗ ಹೋರಾಟಕ್ಕೆ ಧುಮುಕಿದೆ. 28ರಂದು ಸಾಗರ ಪೊಲೀಸ್ ಸ್ಟೇಷನ್ ವೃತ್ತದಲ್ಲಿ ಬೆಳಗ್ಗೆ ಪ್ರತಿಭಟನಾ ಸಭೆ ನಡೆಸಲಾಗುವುದು. ನಂತರ ಜೋಗದ ಕೆಪಿಸಿ ಕಚೇರಿಗೆ ಮನವಿ ಸಲ್ಲಿಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ರಾಜ್ಯದಲ್ಲಿ ಖಾಸಗಿ ಕಂಪನಿಗಳಿಗೆ ವಿದ್ಯುತ್ ಇಲಾಖೆಯನ್ನು ಮಾರುವ ಹುನ್ನಾರ ನಡೆಯುತ್ತಿದೆ. ಖಾಸಗೀಕರಣ ವಿರೋಧಿಸಿ ರೈತ ಸಂಘ ಜೂ.29ರಂದು ಸಾಗರ ಬಂದ್‌ಗೆ ಕರೆ ನೀಡುತ್ತಿದೆ. ಹೋರಾಟಕ್ಕೆ ಬೇರೆ ಬೇರೆ ಸಂಘಟನೆಗಳು ಸಹಕಾರ ನೀಡುತ್ತಿವೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಬಂದ್ ಕರೆಗೆ ಸಹಕಾರ ನೀಡಬೇಕು. ವಿದ್ಯುತ್ ಖಾಸಗೀಕರಣ ಮಾಡಿದರೆ ರೈತರಿಗೆ, ಜನಸಾಮಾನ್ಯರಿಗೆ ಆರ್ಥಿಕ ಹೊರೆಯಾಗಲಿದೆ. ಸಾಕಷ್ಟು ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರ ಸ್ಪಷ್ಟ ಉತ್ತರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಸಾಗರ ಬಂದ್‌ಗೆ ಎಲ್ಲರೂ ಸಹಕಾರ ನೀಡಬೇಕು. ಆ ದಿನ ಬೆಳಗ್ಗೆ 10ಕ್ಕೆ ಗಣಪತಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು.
ಸಾಗರ ಎಪಿಎಂಸಿ ಕಾಂಪೌಂಡ್‌ನ ಸೈಜುಗಲ್ಲುಗಳ ಕಳ್ಳತನವಾಗಿರುವ ಶಂಕೆಯಿದೆ. ಈ ಬಗ್ಗೆ ತನಿಖೆ ನಡೆಸಬೇಕು. ಈ ಹಿನ್ನೆಲೆಯಲ್ಲಿ ತಹಸೀಲ್ದಾರ್ ನಿಷ್ಪಕ್ಷಪಾತ ತನಿಖೆ ನಡೆಸಿ ಜಿಲ್ಲಾಧಿಕಾರಿ, ಸರ್ಕಾರಕ್ಕೆ ವರದಿ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಜತೆಗೆ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ರೈತರಿಗೆ ಸೂಕ್ತ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ರಮೇಶ್ ಕೆಳದಿ, ತಾಲೂಕು ಅಧ್ಯಕ್ಷ ಡಾ. ರಾಮಚಂದ್ರಪ್ಪ, ಪ್ರಮುಖರಾದ ರಾಜಪ್ಪ, ಗಣಪತಿ, ಮೇಘರಾಜ್, ಚಂದ್ರಪ್ಪ ಸುದ್ದಿಗೋಷ್ಠಿಯಲ್ಲಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net