ಇದೇ ವೇಳೆ ಪ್ರಯಾಣಿಕರ ಸುರಕ್ಷೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬಸ್ ಚಾಲಕರು ಅಥವಾ ನಿರ್ವಾಹಕರು ಅನುಚಿತವಾಗಿ ವರ್ತಿಸಿದರೆ, ವಾಹನ ಚಾಲನೆ ವೇಳೆ ಮೊಬೈಲ್ ಫೋನ್(Mobile phone) ಬಳಸಿದರೆ, ಜೋರಾಗಿ ಅಸಭ್ಯ ಹಾಡುಗಳನ್ನು ಪ್ರಸಾರ ಮಾಡಿದರೆ ಅಥವಾ ಇತರೆ ಯಾವುದೇ ಸಮಸ್ಯೆಗಳ ಕುರಿತು ಸಾರ್ವಜನಿಕರು ಸುಲಭವಾಗಿ ದೂರು ಸಲ್ಲಿಸಲು ಅನುಕೂಲವಾಗುವಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಪಬ್ಲಿಕ್ ಐ(Public Eye), ಶಿವಮೊಗ್ಗ ಸಂಚಾರ ಪೊಲೀಸ್ ಸಹಾಯವಾಣಿ ಹಾಗೂ ಪೊಲೀಸ್ ತುರ್ತು ಸಹಾಯವಾಣಿ (112) ಸಂಖ್ಯೆಗಳಿರುವ ಜಾಗೃತಿ ಪೋಸ್ಟರ್‌ಗಳನ್ನು ಸಿಟಿ ಬಸ್‌ಗಳಲ್ಲಿ ಲಗತ್ತಿಸುವ ಮೂಲಕ ಜಾಗೃತಿ ಮೂಡಿಸಿದರು.