ಸಚಿವ ಸಂಪುಟ ವಿಸ್ತರಣೆ(Cabinet expansion) ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡದ ಅವರು, ಹೈಕಮಾಂಡ್ ಭೇಟಿಗಾಗಿ ಹಿರಿಯ ನಾಯಕರು ದೆಹಲಿಗೆ ತೆರಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ತೀರ್ಮಾನ(High Command decision)ವೇ ಅಂತಿಮವಾಗಿದೆ. ದೆಹಲಿ ವರಿಷ್ಠರು ಸೂಕ್ತ ಹಾಗೂ ಉತ್ತಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ. ವರಿಷ್ಠರು ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ನಾವು ಸಂಪೂರ್ಣ ಬದ್ಧರಾಗಿರುತ್ತೇವೆ ಎಂದು ಹೇಳಿದರು.