ಬರ ಅಧ್ಯಯನಕ್ಕೆ ಶೀಘ್ರ ಕೇಂದ್ರ ತಂಡ | Drought study

ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಪ್ರಭುಲಿಂಗ ಕವಳಿಕಟ್ಟಿ ಬರ ನಿರ್ವಹಣೆ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಎನ್.ಹೇಮಂತ್, ವಿ.ಅಭಿಷೇಕ್, ಸತ್ಯನಾರಾಯಣ, ಕೆ.ಮಾಯಣ್ಣ ಗೌಡ ಇದ್ದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಪ್ರಭುಲಿಂಗ ಕವಳಿಕಟ್ಟಿ ಬರ ನಿರ್ವಹಣೆ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಎನ್.ಹೇಮಂತ್, ವಿ.ಅಭಿಷೇಕ್, ಸತ್ಯನಾರಾಯಣ, ಕೆ.ಮಾಯಣ್ಣ ಗೌಡ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನಿಖರ ಅಂಕಿ-ಅಂಶಗಳ ಮಾಹಿತಿಯೊಂದಿಗೆ ಸನ್ನದ್ಧರಾಗಿ
  • ಪ್ರತಿ ವಾರ ತಾಲೂಕುಗಳಲ್ಲಿ ಟಾಸ್ಕ್‌ಫೋರ್ಸ್ ಸಭೆ ನಡೆಸಿ
  • ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ
ಶಿವಮೊಗ್ಗ: ಬರ ಪರಿಸ್ಥಿತಿ ಅವಲೋಕನಕ್ಕಾಗಿ ಕೇಂದ್ರ ಅಧ್ಯಯನ ತಂಡ(Central Study Team) ಶೀಘ್ರ ಭೇಟಿ ನೀಡಲಿದೆ. ಜಿಲ್ಲೆಯ ಬೆಳೆ ಹಾನಿ ಹಾಗೂ ಬರ ತೀವ್ರತೆಯ ನಿಖರ ಅಂಕಿ-ಅಂಶಗಳ ಮಾಹಿತಿಯೊಂದಿಗೆ ಸನ್ನದ್ಧರಾಗಿ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ(District Collector Prabhulinga Kavalikatti)ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಭಾನುವಾರ ನಡೆಸಿದ ಉನ್ನತ ಮಟ್ಟದ ವಿಡಿಯೋ ಸಂವಾದ(High-level video Conversation)ದ ಬಳಿಕ ಡಿಸಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಮುಂಗಾರು ಮಳೆ ಕೊರತೆಯಿಂದ ಉದ್ಭವಿಸಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಂಡವಾಗಿ ಕೆಲಸ ಮಾಡಬೇಕಿದೆ ಎಂದರು.
ಬೆಳೆ ವಿಮೆ(Crop insurance) ಬಗ್ಗೆ ಜಾಗೃತಿ ಮೂಡಿಸಬೇಕು. ಭೂ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಜಾರಿಗೊಳಿಸಬೇಕು. ಈ ಯೋಜನೆಯಡಿ ಭೂಮಿ ಹಂಚಿಕೆ, ಸೌಲಭ್ಯ ವಿತರಣೆ ನಿಗದಿತ ಸಮಯದೊಳಗೆ ಸಾರ್ವಜನಿಕರಿಗೆ ನೀಡಬೇಕು. ಕಂದಾಯ, ಗ್ರಾಮೀಣಾಭಿವೃದ್ಧಿ ಸೇರಿ ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕೆಂದು ಸೂಚಿಸಿದರು.
ಕೃಷಿ, ತೋಟಗಾರಿಕೆ, ಪಶುಪಾಲನೆ ಹಾಗೂ ಕಂದಾಯ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪ್ರತಿದಿನದ ಬರ ಪರಿಸ್ಥಿತಿ ಮತ್ತು ಕೈಗೊಂಡ ಕ್ರಮಗಳ ವರದಿಯನ್ನು ಕಡ್ಡಾಯವಾಗಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು. ಪ್ರತಿ ವಾರ ತಾಲೂಕುಗಳಲ್ಲಿ ಟಾಸ್ಕ್‌ಫೋರ್ಸ್ ಸಭೆ(Taskforce meeting) ನಡೆಸಿ ಸಭಾ ತೀರ್ಮಾನದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಾರದು. ಜಲಾಶಯ ಹಾಗೂ ನೀರಿನ ಪ್ರಮುಖ ಮೂಲಗಳ ಕೇವಲ ಕುಡಿಯುವ ಉದ್ದೇಶಕ್ಕೆ ಕಾಯ್ದಿರಿಸಬೇಕು. ವಾರಕ್ಕೊಮ್ಮೆ ಜಲಾಶಯಗಳ ನೀರಿನ ಮಟ್ಟ(Water levels of reservoirs)ದ ವರದಿ ಸಲ್ಲಿಸಬೇಕು. ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆ ಆಗದಂತೆ ಮುಂಜಾಗ್ರತೆ ವಹಿಸಬೇಕು. ಒಂದು ವರ್ಷಕ್ಕಾಗುವಷ್ಟು ಮೇವು ಲಭ್ಯವಿದ್ದರೂ ಜಾನುವಾರು ಕುಡಿಯುವ ನೀರು, ಮೇವಿನ ಬಗ್ಗೆ ಅಗತ್ಯವಿರುವ ಕಡೆಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಶಿವಮೊಗ್ಗ ಉಪ ವಿಭಾಗಾಧಿಕಾರಿ ಸತ್ಯನಾರಾಯಣ, ಪಾಲಿಕೆ ಆಯುಕ್ತ ಕೆ.ಮಾಯಣ್ಣ ಗೌಡ, ಜಿಪಂ ಉಪ ಕಾರ್ಯದರ್ಶಿಗಳು, ಯೋಜನಾ ನಿರ್ದೇಶಕರು, ತಹಸೀಲ್ದಾರರು, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net