ಉಗ್ರ ಕೃತ್ಯ ತಡೆಯುವಲ್ಲಿ ಕೇಂದ್ರ ವಿಫಲ

ದೇಶದಲ್ಲಿ ಉಗ್ರ ಕೃತ್ಯಗಳನ್ನು ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಮುಖಂಡರು ಸಾಗರದಲ್ಲಿ ಎಸಿ ಕಚೇರಿಗೆ ಮನವಿ ಸಲ್ಲಿಸಿದರು. ಮಹೇಂದ್ರ, ಸದ್ದಾಂ, ಮನೋಜ್ ಇತರರಿದ್ದರು.
ದೇಶದಲ್ಲಿ ಉಗ್ರ ಕೃತ್ಯಗಳನ್ನು ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಮುಖಂಡರು ಸಾಗರದಲ್ಲಿ ಎಸಿ ಕಚೇರಿಗೆ ಮನವಿ ಸಲ್ಲಿಸಿದರು. ಮಹೇಂದ್ರ, ಸದ್ದಾಂ, ಮನೋಜ್ ಇತರರಿದ್ದರು.
Published on
ಸಾಗರ: ದೇಶದಲ್ಲಿ ಪದೇಪದೆ ಭಯೋತ್ಪಾದಕ ದಾಳಿ ನಡೆಯುತ್ತಿದ್ದರೂ ತಡೆಗಟ್ಟುವಲ್ಲಿ ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಬುಧವಾರ ಯುವ ಕಾಂಗ್ರೆಸ್ ಪ್ರಮುಖರು ಉಪವಿಭಾಗಾಧಿಕಾರಿ ಕಚೇರಿಗೆ ಬುಧವಾರ ಮನವಿ ಸಲ್ಲಿಸಿದರು.
ದೇಶದಲ್ಲಿ ಹಿಂದಿಗಿಂತ ಹೆಚ್ಚಾಗಿ ಉಗ್ರಕೃತ್ಯಗಳು ನಡೆಯುತ್ತಿವೆ. ಕಾಶ್ಮೀರದಲ್ಲಿ ನಡೆದ ಕಹಿ ಘಟನೆ ಮರೆಯುವ ಮೊದಲೇ ದೆಹಲಿಯ ಕೆಂಪುಕೋಟೆ ಸಮೀಪ ಉಗ್ರರು ಕಾರು ಬಾಂಬ್ ಸ್ಫೋಟಿಸಿದ್ದಾರೆ. ದೇಶದ ರಾಜಧಾನಿಯಲ್ಲೆ ಉಗ್ರರ ದಾಳಿಯಾಗಿದೆ. ಕೇಂದ್ರ ಸರ್ಕಾರ ನಾಗರಿಕರ ಸುರಕ್ಷತೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಗೃಹ ಸಚಿವ ಅಮಿತ್ ಷಾ ಜವಾಬ್ದಾರಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಇಂತಹ ಘಟನೆಗಳು ನಡೆಯುತ್ತಲೇ ಇವೆ. ದಾಳಿಯ ತನಿಖೆಯನ್ನು ಪಾರದರ್ಶಕವಾಗಿ ನಡೆಸಬೇಕು ಒತ್ತಾಯಿಸಿದರು.
ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ, ನಗರ ಬ್ಲಾಕ್ ಅಧ್ಯಕ್ಷ ಸದ್ದಾಂ, ಮನೋಜ್, ರವಿ, ತುಫೈಲ್, ಶಫಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net