ಶಾಲಾ ಆರಂಭೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳಲ್ಲಿನ ಮಕ್ಕಳಿಗೆ ಬಿಸಿಯೂಟದೊಂದಿಗೆ ಸಿಹಿಯ ವ್ಯವಸ್ಥೆ ಮಾಡಲಾಗಿತ್ತು. ಇದಕ್ಕೆ ಎಸ್‌ಡಿಎಂಸಿ, ಶಿಕ್ಷಕರು, ಪಾಲಕರು, ಸಾರ್ವಜನಿಕರು ಕೈಜೋಡಿಸಿದ್ದರು. ಶಾಲೆಯ ಮೊದಲ ದಿನ ವಿದ್ಯಾರ್ಥಿಗಳಿಗೆ ಅವಿಸ್ಮರಣೀಯ ಆಗಿರುವಂತೆ ನೋಡಿಕೊಳ್ಳಲಾಗಿತ್ತು. ಶಾಲೆಯ ವಾತಾವರಣ ಅಹ್ಲಾದಕರವಾಗಿತ್ತು.