ಕಾರ್ಯಕ್ರಮದ ವೇದಿಕೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯ ಬಿ.ಎಸ್.ಗಣೇಶ್ ಹಾಗೂ ಕುಟುಂಬದವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಭೋಜನ ವ್ಯವಸ್ಥೆ ಒದಗಿಸಿದ್ದ ಪೊಲೀಸ್ ಉಮೇಶ ಅವರನ್ನು ವೇದಿಕೆಗೆ ಬರುವಂತೆ ಹಾಗೂ ಸನ್ಮಾನ ಸ್ವೀಕರಿಸುವಂತೆ ಕಾರ್ಯಕ್ರಮದ ಸಂಟಕರು ಆಹ್ವಾನಿಸಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪೊಲೀಸ್ ಉಮೇಶ್, ನನಗೆ ಮೋಸ ಮಾಡಿದವರ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಬಿ.ಎಸ್.ಗಣೇಶ್ ಮತ್ತು ಕುಟುಂಬ ಸದಸ್ಯರು ವಿರೋಧ ವ್ಯಕ್ತಪಡಿಸಿ, ಇದು ರಾಜಕೀಯ ಕಾರ್ಯಕ್ರಮವಲ್ಲ. ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಆಗ ವೇದಿಕೆಯ ಮುಂಭಾಗದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸ್ ಉಮೇಶ್ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆದಿದೆ ಎನ್ನಲಾಗಿದೆ. ಗಲಾಟೆ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ. ದರ್ಶನ್ ಎಂಬುವನನ್ನು ಬಂಧಿಸಲಾಗಿದೆ.