ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ I road works

ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಸಿದರು. ವಿ.ಅಭಿಷೇಕ್. ಬಿ.ನಿಖಿಲ್, ಅಜ್ಜಯ್ಯ ಇದ್ದರು.
ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಸಿದರು. ವಿ.ಅಭಿಷೇಕ್. ಬಿ.ನಿಖಿಲ್, ಅಜ್ಜಯ್ಯ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಿಸಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ
  • ಅಪೂರ್ಣ ಕಾಮಗಾರಿ ಸ್ಥಳಗಳಲ್ಲಿ ಹೆಚ್ಚಾಗುತ್ತಿವೆ ಅಪಘಾತ
  • ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುರಕ್ಷತಾ ಸಮಿತಿ ಸಭೆ
ಶಿವಮೊಗ್ಗ: ಜಿಲ್ಲೆಯ ಅನೇಕ ಕಡೆ ರಸ್ತೆ (road) ಕಾಮಗಾರಿ (works) ಅಪೂರ್ಣ ಆಗಿರುವುದರಿಂದ ಅಪಘಾತಗಳಾಗುತ್ತಿವೆ. ಇಂತಹ ಸ್ಥಳಗಳಲ್ಲಿ 15 ದಿನದೊಳಗೆ ಕಾಮಗಾರಿ ಪೂರ್ಣಗೊಳಿಸಿ. ಇಲ್ಲವಾದಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು (officers) ಹಾಗೂ ಗುತ್ತಿಗೆದಾರರನ್ನೇ ಹೊಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಎಚ್ಚರಿಸಿದರು.
ಸೋಮವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಸಿದ ಅವರು, ಕೆಲ ವರ್ಷದಿಂದ ಜಿಲ್ಲೆಯಲ್ಲಿ ಕೈಗೊಂಡ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಹಾಗೂ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ ಕಾಮಗಾರಿಗಳು ಅಪೂರ್ಣವಾಗಿವೆ. ಇಂತಹ ಸ್ಥಳಗಳಲ್ಲಿ ಅಪಘಾತಗಳಿಂದ ಸಾವು-ನೋವುಗಳಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಆರಂಭವಾಗಿ ಹಲವು ವರ್ಷಗಳಾದರೂ ಇನ್ನೂ ಮುಗಿದಿಲ್ಲ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಅಪಘಾತಗಳೂ ಸಂಭವಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರು ಎಚ್ಚೆತ್ತು ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಮಲವಗೊಪ್ಪ, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಕಡದಕಟ್ಟೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಆಗುತ್ತಿರುವ ಬಗ್ಗೆ ಜನಪ್ರತಿನಿಧಿಗಳು, ಸಾರ್ವಜನಿಕರು ದೂರಿದ್ದಾರೆ. ಕಾಮಗಾರಿ ವಿಳಂಬ ಕುರಿತು ಅಧಿಕಾರಿಗಳು ಸಮರ್ಥನೆ ಮಾಡಿಕೊಳ್ಳುವುದನ್ನು ಯಾವ ಕಾರಣಕ್ಕೂ ಸಹಿಸುವುದಿಲ್ಲ ಎಂದು ತಿಳಿಸಿದರು.
ಒಂದು ವರ್ಷದಿಂದ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಸದಿರುವ ಬಗ್ಗೆ ಪಿಡಬ್ಲುೃಡಿ ಅಭಿಯಂತರನ್ನು ಪ್ರಶ್ನಿಸಿದ ಜಿಲ್ಲಾಧಿಕಾರಿ, ಇನ್ನು ಮುಂದೆ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಅನುಷ್ಠಾನಗೊಂಡ ಬಗ್ಗೆ ವರದಿ ನೀಡಬೇಕು ಎಂದು ಸೂಚಿಸಿದರು.
ಡಿಎಫ್‌ಒ ಅಜ್ಜಯ್ಯ, ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ನಗರಾಭಿವೃದ್ಧಿ ಕೋಶದ ಉಪನಿರ್ದೇಶಕ ರಂಗಸ್ವಾಮಿ, ಪಿಡಬ್ಲುೃಡಿ ಅಭಿಯಂತ ವಿಜಯಕುಮಾರ್ ಇತರರಿದ್ದರು.
51 ಬ್ಲಾೃಕ್ ಸ್ಪಾಟ್ ಗುರುತು
ರಾಷ್ಟ್ರೀಯ ಹೆದ್ದಾರಿಯಲ್ಲಿ 28, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆಗಳಲ್ಲಿ 14 ಸ್ಥಳ ಸೇರಿ ಒಟ್ಟು 51 ಬ್ಲಾೃಕ್ ಸ್ಪಾಟ್ (ಅಪಘಾತ ವಲಯ)ಗಳನ್ನು ಗುರುತಿಸಲಾಗಿದೆ. ಬಹುತೇಕ ಸ್ಥಳಗಳಲ್ಲಿ ಸಮಸ್ಯೆ ಪರಿಹರಿಸಲು ಗಮನಹರಿಸಲಾಗಿದೆ ಎಂದು ಎಸ್ಪಿ ಬಿ.ನಿಖಿಲ್ ತಿಳಿಸಿದರು. ಗುರುತಿಸಿರುವ ಬ್ಲಾೃಕ್ ಸ್ಪಾಟ್‌ಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವುದರ ಜತೆಗೆ ರಾತ್ರಿ ಸಮಯದಲ್ಲಿ ಅನಾಹುತ ಆಗದಂತೆ ಬೆಳಕಿನ ವ್ಯವಸ್ಥೆ ಮಾಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
"

ರಸ್ತೆ ಕಾಮಗಾರಿ ಕೈಗೊಂಡ ಪ್ರದೇಶದಲ್ಲಿ, ತಿರುವುಗಳಲ್ಲಿ ಸೂಚನಾ ಫಲಕಗಳ ಅಳವಡಿಕೆ, ತಡೆಗೋಡೆ ನಿರ್ಮಿಸುವುದರಿಂದ ಸಂಭಾವ್ಯ ಸಾವು-ನೋವುಗಳನ್ನು ನಿಯಂತ್ರಿಸಬಹುದು. ಶಿವಮೊಗ್ಗ-ಸಾಗರ ರಸ್ತೆಯ ಹಲವು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಅರಣ್ಯ ಇಲಾಖೆ ಪರಿಶೀಲಿಸಿ ನಿರಾಕ್ಷೇಪಣಾ ಪತ್ರ ನೀಡಬೇಕು.

— ಪ್ರಭುಲಿಂಗ ಕವಳಿಕಟ್ಟಿ ಜಿಲ್ಲಾಧಿಕಾರಿ


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net