ಮಹಿಳಾ ಮೀಸಲಾತಿಗೆ ಅಡ್ಡಿಯಾದ ಕಾಂಗ್ರೆಸ್ I reservation congress

ಲೋಕಸಭೆ ಮಹಿಳಾ ಮೀಸಲಾತಿ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ವಿರುದ್ಧ ಶಿವಮೊಗ್ಗ ನಗರ ಬಿಜೆಪಿ ಮಹಿಳಾ ಮೋರ್ಚಾ ಪ್ರಮುಖರು ಪ್ರತಿಭಟನಾ ಮೆರವಿಗೆ ನಡೆಸಿದರು. ಮಧುರಾ ಶಿವಾನಂದ್, ಸುರೇಖಾ ಮುರಳೀಧರ್, ರಶ್ನಿ ಶ್ರೀನಿವಾಸ್, ಶಾಂತಾ ಸುರೇಂದ್ರ ಇತರರಿದ್ದರು.
ಲೋಕಸಭೆ ಮಹಿಳಾ ಮೀಸಲಾತಿ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ವಿರುದ್ಧ ಶಿವಮೊಗ್ಗ ನಗರ ಬಿಜೆಪಿ ಮಹಿಳಾ ಮೋರ್ಚಾ ಪ್ರಮುಖರು ಪ್ರತಿಭಟನಾ ಮೆರವಿಗೆ ನಡೆಸಿದರು. ಮಧುರಾ ಶಿವಾನಂದ್, ಸುರೇಖಾ ಮುರಳೀಧರ್, ರಶ್ನಿ ಶ್ರೀನಿವಾಸ್, ಶಾಂತಾ ಸುರೇಂದ್ರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನಾರಿಶಕ್ತಿ ವಿಧೇಯಕ ಸೋಲಿಗೆ ಕೈ ಕಾರಣ
  • ಬಿಜೆಪಿ ಮೋರ್ಚಾದಿಂದ ಪ್ರತಿಭಟನೆ ನಡೆಸಿ ಆಕ್ರೋಶ
ಶಿವಮೊಗ್ಗ: ಮಹಿಳಾ ಮೀಸಲಾತಿ (reservation) ವಿಧೇಯಕ ಸೋಲಿಗೆ ಕಾರಣವಾದ ಕಾಂಗ್ರೆಸ್ (congress) ಮತ್ತಿತರ ಪ್ರತಿಪಕ್ಷಗಳ ವಿರುದ್ಧ ನಗರ ಬಿಜೆಪಿ (bjp) ಮಹಿಳಾ ಮೋರ್ಚಾ ಪದಾಧಿಕಾರಿಗಳು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, ಎನ್‌ಡಿಎ ಸರ್ಕಾರ ಮಂಡಿಸಿದ ಮಹಿಳಾ ಮೀಸಲಾತಿ ವಿಧೇಯಕವನ್ನು ಸೋಲಿಸಿದ ಕಾಂಗ್ರೆಸ್ ತನ್ನ ಮಹಿಳಾ ವಿರೋಧಿ ನಿಲುವು ಪ್ರಕಟಿಸಿದೆ. ನಾರಿಶಕ್ತಿ ವಂದನಾ ಅಧಿನಿಯಮ ಜಾರಿಗೆ ವಿರೋಧಿಸಿದ ಭ್ರಷ್ಟ ಕಾಂಗ್ರೆಸ್ ವಿರುದ್ಧ ಬಿಜೆಪಿ ದೇಶಾದ್ಯಂತ ಸಮರ ಸಾರಿದೆ. ನಾರಿಶಕ್ತಿಗೆ ಅಡ್ಡವಾದ ಕೈಗಳು, ಮಹಿಳೆಯರ ಹಕ್ಕು ಹತ್ತಿಕ್ಕಿದ ಕಾಂಗ್ರೆಸ್, ಶೇ.33 ಮಹಿಳಾ ಮೀಸಲಾತಿಯನ್ನು ವಿರೋಧಿಸಿದ ಕಾಂಗ್ರೆಸ್‌ಗೆ ಜನರು ತಕ್ಕಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದ ಬಳಿಕ ದೇಶದಲ್ಲಿ ಮಹಿಳೆಯರಿಗೆ ಹೆಚ್ಚಿನ ಗೌರವ, ಸ್ಥಾನ-ಮಾನ ಲಭಿಸಿದೆ. ಅದಕ್ಕೆ ಪೂರಕವಾಗಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಾಯಿತು. ಈವರೆಗೆ ಮಹಿಳೆಯರಿಗೆ ಏನನ್ನೂ ಮಾಡದ ಕಾಂಗ್ರೆಸ್ ಈಗಲೂ ಮಹಿಳಾ ವಿರೋಧಿ ನಿಲುವು ಪ್ರದರ್ಶಿಸಿದೆ ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಕೆ.ಸಿದ್ಧರಾಮಣ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಧುರಾ ಶಿವಾನಂದ್, ನಗರಾಧ್ಯಕ್ಷೆ ರಶ್ಮಿ ಶ್ರೀನಿವಾಸ್, ಮಾಜಿ ಉಪಮೇಯರ್ ಸುರೇಖಾ ಮುರಳಿಧರ್, ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net