ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ಕಾಂಗ್ರೆಸ್ ಪ್ರತಿಭಟನೆ | NEET question paper leak

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್ ಮಾತನಾಡಿದರು. ಬಲ್ಕೀಶ್ ಬಾನು, ಆರ್.ಪ್ರಸನ್ನಕುಮಾರ್, ಎಚ್.ಎಸ್.ಸುಂದರೇಶ್, ಎಸ್.ರವಿಕುಮಾರ್, ಇಸ್ಮಾಯಿಲ್ ಖಾನ್, ಶ್ವೇತಾ ಬಂಡಿ, ಕಲಗೋಡು ರತ್ನಾಕರ್, ಶ್ರೀನಿವಾಸ್ ಕರಿಯಣ್ಣ, ರಮೇಶ್ ಶಂಕರಘಟ್ಟ, ವಿಜಯ್ಕುಮಾರ್ ಇತರರಿದ್ದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್ ಮಾತನಾಡಿದರು. ಬಲ್ಕೀಶ್ ಬಾನು, ಆರ್.ಪ್ರಸನ್ನಕುಮಾರ್, ಎಚ್.ಎಸ್.ಸುಂದರೇಶ್, ಎಸ್.ರವಿಕುಮಾರ್, ಇಸ್ಮಾಯಿಲ್ ಖಾನ್, ಶ್ವೇತಾ ಬಂಡಿ, ಕಲಗೋಡು ರತ್ನಾಕರ್, ಶ್ರೀನಿವಾಸ್ ಕರಿಯಣ್ಣ, ರಮೇಶ್ ಶಂಕರಘಟ್ಟ, ವಿಜಯ್ಕುಮಾರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು
  • ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ
  • ಜಿಲ್ಲಾ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಶಿವಮೊಗ್ಗ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ(NEET question paper leak) ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ನೇತೃತ್ವ(NSUI leadership)ದಲ್ಲಿ ನೂರಾರು ವಿದ್ಯಾರ್ಥಿಗಳು ಬುಧವಾರ ನಗರದ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನೀಟ್ ಪರೀಕ್ಷೆಯನ್ನು ಸಂಪೂರ್ಣ ರದ್ದುಗೊಳಿಸಬೇಕು. ರಾಜ್ಯಗಳಿಗೆ ತಮ್ಮದೇ ಆದ ಸಿಇಟಿ(CET) (ಸಾಮಾನ್ಯ ಪ್ರವೇಶ ಪರೀಕ್ಷೆ) ನಡೆಸಿ ವೈದ್ಯಕೀಯ ಕೋರ್ಸ್‌(Medical course)ಗೆ ಪ್ರವೇಶ ನೀಡಲು ಅವಕಾಶ ನೀಡಬೇಕು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸೂಕ್ತ ತನಿಖೆ ನಡೆಸಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಹಗರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಾವಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್ ಮಾತನಾಡಿ, ಅಕ್ರಮಗಳ ಹಿನ್ನೆಲೆಯಲ್ಲಿ ಕೇಂದ್ರ ಸಚಿವ(Union Minister)ರು ತಕ್ಷಣವೇ ರಾಜೀನಾಮೆ ನೀಡಬೇಕು. ಇಲ್ಲಿವರೆಗೂ ಅವರು ರಾಜೀನಾಮೆ ನೀಡದೆ ಈ ಗಂಭೀರ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಮತ್ತು ಯಾವುದೇ ಸ್ಪಷ್ಟನೆ ನೀಡಲು ಸಿದ್ಧರಿಲ್ಲ ಎಂದು ಕಿಡಿಕಾರಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ(BJP government) ಅಧಿಕಾರಕ್ಕೆ ಬಂದ 12 ವರ್ಷದಲ್ಲಿ ಬಹಳಷ್ಟು ಬಾರಿ ನೀಟ್ ಪ್ರಶ್ನೆಪತ್ರಿಕೆ ಲೀಕ್ ಆಗಿದೆ. ಸುಸೂತ್ರವಾಗಿ ಪರೀಕ್ಷೆ ನಡೆಸಲಾಗದ ಇಂತಹ ಸರ್ಕಾರ ಹೇಗೆ ದೇಶದ ಜನತೆಗೆ ಒಳ್ಳೆಯ ಆಡಳಿತ ಕೊಡಲು ಸಾಧ್ಯ ಎಂದು ಪ್ರಶ್ನಿಸಿದರು.
ರಾಷ್ಟ್ರೀಯ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ದೂರವಾಣಿ ಮೂಲಕ ಸಭೆ ಉದ್ದೇಶಿಸಿ ಮಾತನಾಡಿದರು. ಮಾಜಿ ಸಂಸದ ಆಯನೂರು ಮಂಜುನಾಥ್, ರಾಜ್ಯ ಜವಳಿ ಕೈಮಗ್ಗ ನಿಗಮದ ಅಧ್ಯಕ್ಷ ಚೇತನ್ ಗೌಡ, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಸ್ಮಾಯಿಲ್ ಖಾನ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ವೇತಾ ಬಂಡಿ, ಜಿಪಂ ಮಾಜಿ ಸದಸ್ಯ ಕಲಗೋಡು ರತ್ನಾಕರ್, ಮುಖಂಡರಾದ ಶ್ರೀನಿವಾಸ್ ಕರಿಯಣ್ಣ, ಎಚ್.ಸಿ.ಯೋಗೇಶ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಜಿ.ಡಿ.ಮಂಜುನಾಥ್, ಮುಖಂಡರಾದ ರಮೇಶ್ ಶಂಕರಘಟ್ಟ, ಎಸ್.ಟಿ.ಚಂದ್ರಶೇಖರ್, ವಿಜಯ್ಕುಮಾರ್, ಆರ್.ರಾಜಶೇಖರ್, ಡಾ. ನೇತ್ರಾವತಿ, ಸ್ಟೆಲ್ಲಾ ಮಾರ್ಟಿನ್, ಅರ್ಚನಾ ನಿರಂಜನ್, ಸಮಿನಾ ಕೌಸರ್, ಯು.ಶಿವಾನಂದ್, ಡಾ. ಶರತ್ ಮರಿಯಪ್ಪ, ಮಧುಸೂದನ್, ಸುವರ್ಣಾ ನಾಗರಾಜ್, ಪಾಲಾಕ್ಷಿ ಇತರರಿದ್ದರು.
"

ಕೇಂದ್ರ ಸರ್ಕಾರವು ದೇಶದ ಬಡ ಮತ್ತು ಮಧ್ಯಮ ವರ್ಗದ ಮಕ್ಕಳ ಜತೆಗೆ ಚೆಲ್ಲಾಟವಾಡುತ್ತಿದೆ. ಕೇಂದ್ರದ ವೈಫಲ್ಯಕ್ಕೆ ಈಗ 13 ಮಕ್ಕಳು ಬಲಿಯಾಗಿದ್ದಾರೆ. ಪ್ರಧಾನಿ ಮತ್ತು ಕೇಂದ್ರ ಶಿಕ್ಷಣ ಸಚಿವರು ಆ ಮಕ್ಕಳ ಕುಟುಂಬದವರಿಗೆ ಸಾಂತ್ವನ ಹೇಳುವ ಕೆಲಸವನ್ನೂ ಮಾಡಿಲ್ಲ. ಅಷ್ಟು ದುರಂಹಕಾರ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಬಂದಿದೆ.

— ಬಲ್ಕೀಶ್ ಬಾನು, ಎಂಎಲ್‌ಸಿ
"

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನೀಟ್ ಮಾತ್ರವಲ್ಲ, ಎಲ್ಲ ರೀತಿಯ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಲೀಕ್ ಆಗಿವೆ. ಸಚಿವ ಧರ್ಮೇಂದ್ರ ಪ್ರಧಾನ್ ಅತ್ಯಂತ ಭ್ರಷ್ಟ ಮಂತ್ರಿ ಎನ್ನುವ ಕುಖ್ಯಾತಿ ಹೊಂದಿದ್ದಾರೆ. ಇವರನ್ನು ಸಚಿವ ಸ್ಥಾನದಿಂದ ವಜಾಗೊಳಿಸದ ಪ್ರಧಾನಿಗಳು, ಈ ದೇಶದ ಯುವ ಜನರಿಗೆ ಮೋಸ ಮಾಡುತ್ತಿದ್ದಾರೆ.

— ಎಚ್.ಎಸ್.ಸುಂದರೇಶ್, ಸೂಡಾ ಅಧ್ಯಕ್ಷ



ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net