ಮುಂದಿನ ಬಾರಿಯೂ ಕಾಂಗ್ರೆಸ್‌ಗೆ ಅಧಿಕಾರ

ಸಾಗರದಲ್ಲಿ ಬ್ಲಾಕ್ ಕಾಂಗ್ರೆಸ್ ಏರ್ಪಡಿಸಿದ್ದ ಎಸ್‌ಐಆರ್ ಪ್ರಗತಿ ಪರಿಶೀಲನಾ ಸಭೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಆಯನೂರು ಮಂಜುನಾಥ್, ಚಂದ್ರಪ್ಪ ಕಲಸೆ, ಬಿ.ಆರ್.ಜಯಂತ್, ಎನ್.ಉಷಾ ಇತರರಿದ್ದರು.
ಸಾಗರದಲ್ಲಿ ಬ್ಲಾಕ್ ಕಾಂಗ್ರೆಸ್ ಏರ್ಪಡಿಸಿದ್ದ ಎಸ್‌ಐಆರ್ ಪ್ರಗತಿ ಪರಿಶೀಲನಾ ಸಭೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಆಯನೂರು ಮಂಜುನಾಥ್, ಚಂದ್ರಪ್ಪ ಕಲಸೆ, ಬಿ.ಆರ್.ಜಯಂತ್, ಎನ್.ಉಷಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಗೋಪಾಲಕೃಷ್ಣ ಬೇಳೂರು ವಿಶ್ವಾಸ
  • ಎಸ್‌ಐಆರ್ ಪ್ರಗತಿ ಪರಿಶೀಲನೆ
  • ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ನಡೆಸಿ
ಸಾಗರ: ಮುಂದಿನ ವರ್ಷ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಮೂರು ತಿಂಗಳಿನಲ್ಲಿ ಸಿದ್ಧತೆ ಆರಂಭಗೊಳ್ಳಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಬ್ಲಾಕ್ ಕಾಂಗ್ರೆಸ್‌ನಿಂದ ಏರ್ಪಡಿಸಿದ್ದ ಎಸ್‌ಐಆರ್ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿ, ಗ್ರಾಪಂ ಬಳಿಕ ತಾಪಂ ಹಾಗೂ ಜಿಪಂ ಚುನಾವಣೆ ನಡೆಯಲಿದೆ. ಎಸ್‌ಐಆರ್ ವೇಳೆ ಎಲ್ಲ ಮತದಾರರು ಪಟ್ಟಿಯಲ್ಲಿರುವಂತೆ ಎಚ್ಚರ ವಹಿಸುವುದು ಕಾರ್ಯಕರ್ತರ ಜವಾಬ್ದಾರಿ ಎಂದು ತಿಳಿಸಿದರು.
ಎಸ್‌ಐಆರ್ ರಾಜ್ಯದಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ. 2023ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮೂರು ಸ್ಥಾನ ಗೆದ್ದಿದ್ದು, 2028ರಲ್ಲಿ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದರು.
ಬಿಜೆಪಿಗೆ ನಿರಾಸೆ: ಸಿದ್ದರಾಮಯ್ಯ ರಾಜಿನಾಮೆ ಕೊಡುವುದಿಲ್ಲ, ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹಗಲುಗನಸು ಕಾಣುತ್ತಿದ್ದ ಬಿಜೆಪಿಗೆ ನಿರಾಸೆಯಾಗಿದೆ. ಸಿದ್ದರಾಮಯ್ಯ ರಾಜಿನಾಮೆ ನೀಡಿ ಮಾದರಿಯಾಗಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ನಂತರ ಬಿಜೆಪಿ ಕಾಣೆಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಕೆಳಗಿಳಿಸುವ ಪ್ರಯತ್ನ ನಡೆಯುತ್ತಿದೆ. ಜೆಡಿಎಸ್ ಸಣ್ಣಪುಟ್ಟ ಹೋರಾಟಕ್ಕೆ ಸೀಮಿತವಾಗಿದೆ ಟೀಕಿಸಿದರು.
ಮಾಜಿ ಸಂಸದ ಆಯನೂರು ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಎಸ್‌ಐಆರ್ ಪ್ರಕ್ರಿಯೆಗೆ ಎಲ್ಲ ರೀತಿ ಸಹಕಾರ ನೀಡುತ್ತಿದೆ. ಪ್ರತಿಯೊಬ್ಬರೂ ಎಸ್‌ಐಆರ್‌ನಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮತದಾನದ ಹಕ್ಕಿನಿಂದ ಜನರು ವಂಚಿತರಾಗದಂತೆ ನಿಗಾವಹಿಸಬೇಕು ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಬಿ.ಆರ್.ಜಯಂತ್, ಸುರೇಶ್ ಬಾಬು, ಎಚ್.ಎಂ.ರವಿಕುಮಾರ್, ಸದ್ದಾಂ ದೊಡ್ಮನೆ, ಕೆ.ಹೊಳೆಯಪ್ಪ, ಮಕ್ಬೂಲ್ ಅಹ್ಮದ್, ಎಲ್.ಚಂದ್ರಪ್ಪ, ಕಬೀರ್, ಅನಿತಾ ಕುಮಾರಿ, ಎನ್.ಉಷಾ, ಪ್ರಭಾವತಿ, ಗಣಪತಿ ಮಂಡಗಳಲೆ, ಡಿ.ದಿನೇಶ್, ಅನ್ವರ್ ಬಾಷಾ, ಕನ್ನಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net