ಕೇಂದ್ರ ಕಾರಾಗೃಹದಲ್ಲಿ ಸಜಾ ಬಂಧಿ ಸಾವು । convicted prisoner Death

ಉಡುಪಿ ಜಿಲ್ಲೆಯ ಪೆರಡೂರು ಗ್ರಾಮದ ಬಸವ.
ಉಡುಪಿ ಜಿಲ್ಲೆಯ ಪೆರಡೂರು ಗ್ರಾಮದ ಬಸವ.
Published on
ಶಿವಮೊಗ್ಗ: ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಸಜಾ ಬಂಧಿ(convicted prisoner)ಯೊಬ್ಬರು ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಪೆರಡೂರು(Peradooru)ಗ್ರಾಮದ ಬಸವ (78) ಮೃತರು.
2019ರ ಸೆ.25ರಂದು ಉಡುಪಿ(Udupi) ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 10 ವರ್ಷ ಶಿಕ್ಷೆಗೆ ಗುರಿಯಾಗಿದ್ದರು. ಸೆ.30ರಂದು ಉಡುಪಿ ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗ ಕಾರಾಗೃಹಕ್ಕೆ ಅವರನ್ನು ಸ್ಥಳಾಂತರಗೊಂಡಿದ್ದರು. ಬಸವ ಅವರು ಮಧುಮೇಹ(Sugar), ರಕ್ತದೊತ್ತಡ(BP) ಹಾಗೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.
ಹಲವಾರು ಬಾರಿ ಮೆಗ್ಗಾನ್ ಆಸ್ಪತ್ರೆ(Mcggan hospital)ಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೂ ಕಳುಹಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸೋಮವಾರ ರಾತ್ರಿ ತುರ್ತು ಚಿಕಿತ್ಸೆಗೆ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net