ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಿ | SIR

ಸಾಗರದ ಅಣಲೆಕೊಪ್ಪ ಬಡಾವಣೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಹರತಾಳು ಹಾಲಪ್ಪ, ದೇವೇಂದ್ರಪ್ಪ, ಗಣೇಶ್‌ಪ್ರಸಾದ್, ಮೈತ್ರಿ ಪಾಟೀಲ್, ಬಿ.ಟಿ.ರವೀಂದ್ರ ಇದ್ದರು.
ಸಾಗರದ ಅಣಲೆಕೊಪ್ಪ ಬಡಾವಣೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಹರತಾಳು ಹಾಲಪ್ಪ, ದೇವೇಂದ್ರಪ್ಪ, ಗಣೇಶ್‌ಪ್ರಸಾದ್, ಮೈತ್ರಿ ಪಾಟೀಲ್, ಬಿ.ಟಿ.ರವೀಂದ್ರ ಇದ್ದರು.
Published on
ಸಾಗರ: ಮತದಾನದ ಹಕ್ಕು ರಕ್ಷಣೆ ಮಾಡಿಕೊಳ್ಳಲು ಎಸ್‌ಐಆರ್ ಪೂರಕ ಮತ್ತು ಪ್ರೇರಕ. ಪ್ರತಿಯೊಬ್ಬರೂ ತಮ್ಮ ಮಾಹಿತಿಯನ್ನು ವ್ಯವಸ್ಥಿತವಾಗಿ ನೀಡಿ ಪರಿಷ್ಕರಣೆಗೆ ಸಹಕರಿಸಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು
ಸಾಗರದ ಅಣಲೆಕೊಪ್ಪ ಬಡಾವಣೆಯಲ್ಲಿ ಬುಧವಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯಿಂದ ಅರ್ಹರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು.
20 ವರ್ಷಕ್ಕೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿತ್ತು. ಆದರೆ ಇಷ್ಟೊಂದು ನಿಗಾ ವಹಿಸುತ್ತಿರಲಿಲ್ಲ. ಇದರಿಂದ ಒಬ್ಬರ ಮತ ಎರಡು ಮೂರು ಕಡೆ ಇದ್ದು, ಕೆಲವರು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದನ್ನು ಮನಗಂಡು ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವ ಮೂಲಕ ವಿಶೇಷ ಹೆಜ್ಜೆ ಇರಿಸಿದೆ ಎಂದರು.
ಎಸ್‌ಐಆರ್‌ನಲ್ಲಿ ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್‌ನವರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಬೇರೆ ದೇಶದವರು ಅನಧಿಕೃತವಾಗಿ ನಮ್ಮ ದೇಶದಲ್ಲಿ ಇರಬಾರದು. ಒಬ್ಬರದು ಒಂದೇ ಕಡೆ ವೋಟು ಇರಬೇಕು. ಜನರು ಸಹಕಾರ ನೀಡಬೇಕು. ಕಾಂಗ್ರೆಸ್‌ನವರಿಗೆ ಅಭದ್ರತೆ ಕಾಡುತ್ತಿದೆ. ನಿಮ್ಮ ವೋಟು ತೆಗೆದು ಬಿಡುತ್ತಾರೆ ಎಂದು ಅಲ್ಪಸಂಖ್ಯಾತರಲ್ಲಿ ಭಯ ಹುಟ್ಟಿಸುವ ಕೆಲಸ ಕಾಂಗ್ರೇಸ್ ಮಾಡುತ್ತಿದೆ ಎಂದು ಹೇಳಿದರು.
ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದೇವೇಂದ್ರಪ್ಪ, ನಗರ ಅಧ್ಯಕ್ಷ ಗಣೇಶ್‌ಪ್ರಸಾದ್, ನಗರಸಭೆ ಮಾಜಿ ಅಧ್ಯಕ್ಷೆ ಮೈತ್ರಿ ಪಾಟೀಲ್, ಬಿ.ಟಿ.ರವೀಂದ್ರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net