ಮಣಿಪುರಿ ಸ್ಟಿಕ್ ಡಾನ್ಸ್, ಶಾಸ್ತ್ರೀಯ ನೃತ್ಯ-ನವದುರ್ಗೆ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಗುಜರಾತಿನ ಗಾರ್ಬ ಮತ್ತು ದಾಂಡಿಯಾ, ಮಣಿಪುರಿ ಧೋಲ್ ಚಲಮ್, ಕಥಕ್ ನೃತ್ಯ, ನವರಂಗ್, ಪಶ್ಚಿಮ ಬಂಗಾಳದ ಪುರುಲಿಯಾ ಸಿಂಹ ನೃತ್ಯಗಳನ್ನು ಪ್ರದರ್ಶಿಸಲಿದ್ದಾರೆ. ಯುವಜನರಲ್ಲಿ ಸಾಂಸ್ಕೃತಿಕ ಅಭಿರುಚಿ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.