25ರಂದು ದೈವಜ್ಞ ದರ್ಶನ ಕಾರ್ಯಕ್ರಮ | relegion programme

ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಶ್ರೀ ಮತ್ತು ಶ್ರೀ ಸುಜ್ಞಾನೇಶ್ವರ ಭಾರತೀ ಶ್ರೀ
ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಶ್ರೀ ಮತ್ತು ಶ್ರೀ ಸುಜ್ಞಾನೇಶ್ವರ ಭಾರತೀ ಶ್ರೀ
Published on
ಸೊರಬ: ಪಟ್ಟಣದ ಶ್ರೀರಂಗ ಸಭಾಂಗಣದಲ್ಲಿ ಡಿ.25ರಂದು ದೈವಜ್ಞ ದರ್ಶನ ಸ್ವಾಗತ ಸಮಿತಿ ಮತ್ತು ದೈವಜ್ಞ ಬ್ರಾಹ್ಮಣ ಸಮಾಜದಿಂದ ದೈವಜ್ಞ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಜಿ.ರಾಮಚಂದ್ರ ತಿಳಿಸಿದ್ದಾರೆ.
ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಮಠಾಧೀಶ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿ ಹಾಗೂ ಪರಮ ಪೂಜ್ಯ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳ ದೈವಜ್ಞ ದರ್ಶನ ನಡೆಯಲಿದೆ ಎಂದು ಹೇಳಿಕೆ ನೀಡಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 7 ಗಂಟೆಯಿಂದ ಶ್ರೀ ಸತ್ಯನಾರಾಯಣ ಸ್ವಾಮಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಪುಷ್ಪಾರ್ಚನೆ, ಶ್ರೀ ಸತ್ಯನಾರಾಯಣ ಸ್ವಾಮಿ ವ್ರತ, 9ಕ್ಕೆ ಶ್ರೀ ರಂಗನಾಥ ಸ್ವಾಮಿ ದೇವಾಲಯದಿಂದ ಸ್ವಾಮೀಜಿಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಚಿಕ್ಕ ಪೇಟೆ ಮಾರ್ಗವಾಗಿ ವಿವಿಧ ಕಲಾ ತಂಡಗಳಿಂದ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಗುವುದು. ನಂತರ ಶ್ರೀಗಳ ಪಾದುಕಾ ಪೂಜೆ ನೆರವೇರಲಿದೆ. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪ್ರಾಸ್ತಾವಿಕ ನುಡಿ, ಗುರುವಂದನೆ, ಶ್ರೀಗಳಿಗೆ ಫಲ-ಪುಷ್ಪ ಸಮರ್ಪಣೆ, ಶ್ರೀಗಳಿಂದ ಆಶೀರ್ವಚನ, ಫಲ ಮಂತ್ರಾಕ್ಷತೆ, ಮಹಾ ಪ್ರಸಾದ ಸೇವೆ ನೆರವೇರಲಿದೆ ಎಂದಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net