ಪಾರದರ್ಶಕ, ನಿಖರ ಜನಗಣತಿಗೆ ಡಿಸಿ ಸೂಚನೆ | Census Workshop

ನಗರದ ಬಿ.ಎಚ್.ರಸ್ತೆಯ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿದರು. ವಿ.ಅಭಿಷೇಕ್, ಎಸ್.ವಿ.ರಾಜೀವ್ ಇದ್ದರು.
ನಗರದ ಬಿ.ಎಚ್.ರಸ್ತೆಯ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿದರು. ವಿ.ಅಭಿಷೇಕ್, ಎಸ್.ವಿ.ರಾಜೀವ್ ಇದ್ದರು.
Published on
ಶಿವಮೊಗ್ಗ: ಜನಗಣತಿ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ನಿಖರವಾಗಿ ನಡೆಸುವಂತೆ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ(Prabhulinga Kavalikatti) ನಿರ್ದೇಶನ ನೀಡಿದರು.
ನಗರದ ಬಿ.ಎಚ್.ರಸ್ತೆಯ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಶಿವಮೊಗ್ಗ ಗ್ರಾಮಾಂತರ ವಿಭಾಗದ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಏರ್ಪಡಿಸಿದ್ದ ಕಾರ್ಯಾಗಾರ(Workshop)ದಲ್ಲಿ ಮಾತನಾಡಿದ ಅವರು, ಗಣತಿ ಸಂದರ್ಭದಲ್ಲಿ ಪ್ರತಿಯೊಂದು ಕುಟುಂಬದ ಸದಸ್ಯರು ನೀಡುವ ಮಾಹಿತಿ ಅತ್ಯಂತ ನಿಖರವಾಗಿರಬೇಕು. ಉಪಜಾತಿ ಮತ್ತು ಪರ್ಯಾಯ ಹೆಸರುಗಳ ಬಗ್ಗೆ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದರು.
ಸ್ವಯಂ ಗಣತಿ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಜಿಲ್ಲೆಯ ಪ್ರತಿಯೊಂದು ಮನೆ ಮತ್ತು ಪ್ರದೇಶದ ನಿವಾಸಿಗಳನ್ನು ಈ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಒಳಪಡಿಸಬೇಕು. ಯಾವುದೇ ಒಂದು ಕುಟುಂಬವೂ ಗಣತಿ(Census)ಯಿಂದ ವಂಚಿತವಾಗಬಾರದು. ಗಣತಿಗಾಗಿ ಬಳಸಲಾಗುವ ಡಿಜಿಟಲ್ ಪೋರ್ಟಲ್‌ಗಳಲ್ಲಿ ದತ್ತಾಂಶವನ್ನು ದಾಖಲಿಸುವಾಗ ತಾಂತ್ರಿಕ ದೋಷಗಳಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದರು.
ಸಾರ್ವಜನಿಕರು ನೀಡುವ ವೈಯಕ್ತಿಕ ಮತ್ತು ಸಾಮಾಜಿಕ ಮಾಹಿತಿಯ ಗೌಪ್ಯತೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ತಹಸೀಲ್ದಾರ್‌(Tahsildar)ಗಳು, ಮೇಲ್ವಿಚಾರಕರು ಮತ್ತು ಗಣತಿದಾರರು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದರು. ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಶಿವಮೊಗ್ಗ ತಹಸೀಲ್ದಾರ್ ಎಸ್.ವಿ.ರಾಜೀವ್ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net