ಜಿಪಂ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಸಲಹಾ ಸಮಿತಿ ಹಾಗೂ ಜಿಲ್ಲಾಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಬ್ಯಾಂಕಿಂಗ್(Banking) ಮತ್ತು ಆರ್ಥಿಕ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬ್ಯಾಂಕಿಂಗ್ ಸೌಲಭ್ಯ ಮತ್ತು ಆರ್ಥಿಕ ಭದ್ರತೆ ಒದಗಿಸುವುದು ಪ್ರಧಾನಿ ನರೇಂದ್ರ ಮೋದಿ(Narendra modi) ಅವರ ಪ್ರಮುಖ ಧ್ಯೇಯವಾಗಿದೆ. ಪಿಎಂ-ಸ್ವನಿ, ಮುದ್ರಾ ಯೋಜನೆ, ಪಿಎಂ-ವಿಶ್ವಕರ್ಮ, ಪಿಎಂ-ಸೂರ್ಯಘರ್ ಹಾಗೂ ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್‌ನಂತಹ ಮಹತ್ವಾಕಾಂಕ್ಷಿ ಯೋಜನೆಗಳು ಕೇವಲ ಅಂಕಿ ಅಂಶಗಳಿಗೆ ಸೀಮಿತವಾಗದೆ, ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂದರು.