ಶುದ್ಧ ನೀರು ಪೂರೈಸುವಂತೆ ಒತ್ತಾಯ | Demand

ಭದ್ರಾವತಿ ತಾಲೂಕಿನ ದೊಣಬಘಟ್ಟ ಹಾಗೂ ಬಿಳಿಕಿ ಗ್ರಾಪಂನ ಗ್ರಾಮಗಳಿಗೆ ಶುದ್ಧ ನೀರು ಪೂರೈಸುವಂತೆ ಒತ್ತಾಯಿಸಿ ಅಭಿಯಂತ ಅಶೋಕ್ ಎಲ್. ವಾಸನದ್ ಅವರಿಗೆ ಆರ್.ವೇಣುಗೋಪಾಲ್ ಮನವಿ ಸಲ್ಲಿಸಿದರು.
ಭದ್ರಾವತಿ ತಾಲೂಕಿನ ದೊಣಬಘಟ್ಟ ಹಾಗೂ ಬಿಳಿಕಿ ಗ್ರಾಪಂನ ಗ್ರಾಮಗಳಿಗೆ ಶುದ್ಧ ನೀರು ಪೂರೈಸುವಂತೆ ಒತ್ತಾಯಿಸಿ ಅಭಿಯಂತ ಅಶೋಕ್ ಎಲ್. ವಾಸನದ್ ಅವರಿಗೆ ಆರ್.ವೇಣುಗೋಪಾಲ್ ಮನವಿ ಸಲ್ಲಿಸಿದರು.
Published on
ಭದ್ರಾವತಿ: ತಾಲೂಕಿನ ದೊಣಬಘಟ್ಟ ಹಾಗೂ ಬಿಳಿಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ಒತ್ತಾಯಿಸಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆ  ಮುಖ್ಯ ಅಭಿಯಂತ ಅಶೋಕ್ ಎಲ್. ವಾಸನದ್ ಅವರಿಗೆ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಚೇರ‌್ಮನ್ ಆರ್.ವೇಣುಗೋಪಾಲ್ ಮನವಿ ಸಲ್ಲಿಸಿದರು.
ಗ್ರಾಪಂಗಳ ವ್ಯಾಪ್ತಿಯ ಗ್ರಾಮಗಳಿಗೆ ಬಿಳಿಕಿ ಕೆರೆಯಿಂದ ಕುಡಿಯುವ ನೀರು ಸರಬರಾಜಾಗುತ್ತಿದೆ. ಈ ಕೆರೆಯಲ್ಲಿ ಮೀನು ಸಾಕಣೆ ಮಾಡುತ್ತಿರುವುದರಿಂದ ಕೆರೆ ನೀರು ಕಲ್ಮಶದಿಂದ ಕೂಡಿದೆ. ಅಲ್ಲದೆ ಈ ಕೆರೆಗೆ ಸಮೀಪದ ಜಮೀನುಗಳಿಂದ ರಾಸಾಯನಿಕ ಸೇರ್ಪಡೆಗೊಳ್ಳುವ ಸಾಧ್ಯತೆಗಳಿವೆ. ಹಾಗಾಗಿ ಬಿಳಿಕಿ ಕೆರೆಯ ನೀರಿನ ಬದಲಿಗೆ ನಗರಸಭೆ ವ್ಯಾಪ್ತಿಯ ಕಾಗದನಗರ, ಆನೆಕೊಪ್ಪ ಸಮೀಪದ  ಭದ್ರಾ ನದಿಯಿಂದ ನೀರನ್ನು ಕೊಳವೆ ಮಾರ್ಗಗಳ ಮೂಲಕ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಟ್ಯಾಂಕ್‌ಗಳನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net