ಭದ್ರಾವತಿ: ನಗರದ ಹೊಸಸೇತುವೆ ಕೊನೆಯ ಭಾಗದಲ್ಲಿ ಉಪಯೋಗವಾಗದೆ ಬಿದ್ದಿರುವ ಕಬ್ಬಿಣದ ಪೈಪ್ಗಳನ್ನು ಬೇರೆಡೆಗೆ ಸ್ಥಳಾಂತರಿಸಿ ವಾಹನ ಸವಾರರ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಸಿದ್ದಾರೂಢನಗರದ ನಿವಾಸಿಗಳು ಒತ್ತಾಯಿಸಿದ್ದಾರೆ. ಕೆಲ ತಿಂಗಳುಗಳಿಂದ ಈ ಜಾಗದಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ವಾಹನ ಚಾಲಕರು ಆಸ್ಪತ್ರೆಗೆ ದಾಖಲಾಗಿರುವ ಟನೆಗಳು ನಡೆದಿವೆ. ಸ್ಥಳಿಯರು ಈಗಾಗಲೇ ಹಲವು ಬಾರಿ ನಗರಸಭೆ ಪೌರಾಯುಕ್ತರ ಗಮನಕ್ಕೆ ತಂದಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ. ಕೂಡಲೇ ನಗರಸಭೆ ಕ್ರಮ ಕೈಗೊಂಡು ಕಬ್ಬಿಣದ ಪೈಪ್ಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಸುಗಮ ಸಂಚಾರಕ್ಕೆ ಅವಕಾಶ ಒದಗಿಸುವಂತೆ ನಿವಾಸಿಗಳು ಆಗ್ರಹಿಸಿದ್ದಾರೆ.