ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸ ಆಗ್ರಹ | HighCourt Bench

ಜಿಲ್ಲಾ ವಕೀಲರ ಸಂಘದ ಹೋರಾಟಕ್ಕೆ ಬೆಂಬಲ ಸೂಚಿಸಿ ಕರ್ನಾಟಕ ಕಾರ್ಯಕರ್ತರ ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕ ಎನ್.ರವಿಕುಮಾರ್ ಮಾತನಾಡಿದರು. ಯು.ಎಚ್.ವೈದ್ಯನಾಥ್, ಆರ್.ಎಸ್.ಹಾಲಸ್ವಾಮಿ ಇತರರಿದ್ದರು.
ಜಿಲ್ಲಾ ವಕೀಲರ ಸಂಘದ ಹೋರಾಟಕ್ಕೆ ಬೆಂಬಲ ಸೂಚಿಸಿ ಕರ್ನಾಟಕ ಕಾರ್ಯಕರ್ತರ ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕ ಎನ್.ರವಿಕುಮಾರ್ ಮಾತನಾಡಿದರು. ಯು.ಎಚ್.ವೈದ್ಯನಾಥ್, ಆರ್.ಎಸ್.ಹಾಲಸ್ವಾಮಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಿವಮೊಗ್ಗದಿಂದ ಮಂಗಳೂರಿಗೆ ಹೋಗಿ ಬರಲು ಕಷ್ಟ
  • ವಕೀಲರ ಸಂಘದ ಪದಾಧಿಕಾರಿಗಳ ಅನಿರ್ದಿಷ್ಟಾವಧಿ ಪ್ರತಿಭಟನೆ
  • ಪತ್ರಕರ್ತರ ಸಂಘ ಸೇರಿ ವಿವಿಧ ಸಂಘಟನೆಗಳ ಬೆಂಬಲ
ಶಿವಮೊಗ್ಗ: ಮಧ್ಯ ಕರ್ನಾಟಕ ಭಾಗದ ಜನರಿಗೆ ಕಡಿಮೆ ವೆಚ್ಚದಲ್ಲಿ ಮತ್ತು ಸುಲಭವಾಗಿ ನ್ಯಾಯ ದೊರಕುವಂತಾಗಬೇಕು ಎಂಬ ಉದ್ದೇಶದಿಂದ ಶಿವಮೊಗ್ಗದಲ್ಲಿ ಹೈಕೋರ್ಟ್(HighCourt) ಸಂಚಾರಿ ಪೀಠ ಸ್ಥಾಪಿಸಬೇಕೆಂದು ಆಗ್ರಹಿಸಿ ವಕೀಲರು ನಡೆಸುತ್ತಿರುವ ಹೋರಾಟಕ್ಕೆ ಗುರುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(Journalists' Association)ದ ಶಿವಮೊಗ್ಗ ಜಿಲ್ಲಾ ಶಾಖೆ ಸೇರಿ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದವು.
ವಕೀಲರ ಭವನದ ಎದುರು ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ(Protest) ಹಮ್ಮಿಕೊಂಡಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಉತ್ತರ ಕನ್ನಡ ಸೇರಿ ಮಲೆನಾಡು ಹಾಗೂ ಮಧ್ಯ ಕರ್ನಾಟಕ ಭಾಗದ ಜನರಿಗಾಗಿ ಶಿವಮೊಗ್ಗದಲ್ಲೇ ಪೀಠ ಸ್ಥಾಪಿಸಬೇಕೆಂದು ವಿವಿಧ ಸಂಘಟನೆಗಳ ಪ್ರಮುಖರು ಹಾಗೂ ಸಾರ್ವಜನಿಕರು ಒತ್ತಾಯಿಸಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಯು.ಎಚ್.ವೈದ್ಯನಾಥ್ ಮಾತನಾಡಿ, ಶಿವಮೊಗ್ಗ ಸುತ್ತಮುತ್ತಲಿನ ಜಿಲ್ಲೆಗಳಿಗೆ ಕೇಂದ್ರಸ್ಥಾನವಾಗಿದೆ. ಈಗಾಗಲೇ 18 ನ್ಯಾಯಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ಮಂಗಳೂರು ಪೀಠ(Mangalore Bench)ಕ್ಕೆ ಶಿವಮೊಗ್ಗ ಸೇರ್ಪಡೆಯಾದರೆ ಮಧ್ಯ ಕರ್ನಾಟಕದಿಂದ ಮಂಗಳೂರಿಗೆ ಹೋಗಿ ಬರಲು ಕಷ್ಟವಾಗುತ್ತದೆ. ಆದ್ದರಿಂದ ಹೈಕೋರ್ಟ್ ಪೀಠವನ್ನು ಶಿವಮೊಗ್ಗದಲ್ಲೇ ಸ್ಥಾಪಿಸುವುದು ಒಳಿತು ಎಂದರು.
ರಾಜ್ಯ ಸಂಘದ ನಿರ್ದೇಶಕ ಎನ್.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಎಸ್.ಹಾಲಸ್ವಾಮಿ, ಉಪಾಧ್ಯಕ್ಷ ದೇಶಾದ್ರಿ ಹೊಸಮನಿ, ಟಿ.ಸತ್ಯನಾರಾಯಣ್, ಹಿರಿಯ ಪತ್ರಕರ್ತ ಜಿ.ಟಿ.ಸತೀಶ್, ಡಾ. ಬಾಲಕೃಷ್ಣ ಹೆಗಡೆ, ನಾಗರಾಜ್ ಶೆಣೈ, ಕೆ.ಆರ್.ಸೋಮನಾಥ, ಭರತ್‌ರಾಜ್ ಸಿಂಗ್, ಆರುಂಡಿ ಶ್ರೀನಿವಾಸ್, ಗಾರಾ ಶ್ರೀನಿವಾಸ್, ಸತೀಶ್ ಮುಂಚೆಮನೆ, ಸತೀಶ್, ಶ್ರೀಕಾಂತ್, ಸುರೇಶ್ ಸುದರ್ಶನ್, ಸ್ಪಂದನ ಚಂದ್ರು, ಶಿವಮೊಗ್ಗ ಯೋಗರಾಜ್, ವಿಜಯ್‌ಕುಮಾರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net