ಜಿಲ್ಲಾ ನ್ಯಾಯಾಧೀಶ ಮಂಜುನಾಥ ನಾಯಕ್ ವರ್ಗಾವಣೆ

ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್
ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್
Published on
ಶಿವಮೊಗ್ಗ: ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಅವರನ್ನು ಬೆಳಗಾವಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಹೈಕೋರ್ಟ್ ವರ್ಗಾವಣೆ(transfer)ಗೊಳಿಸಿದೆ.
ಮಂಜುನಾಥ್ ನಾಯಕ್ ಅವರು ಬೆಂಗಳೂರಿನ ಹೈಕೋರ್ಟ್‌(High Court)ನಲ್ಲಿ ನೇಮಕಾತಿ ನಿಬಂಧಕರಾಗಿ ಸೇವೆ ಸಲ್ಲಿಸಿ 2023ರ ಜೂನ್‌ನಲ್ಲಿ ಶಿವಮೊಗ್ಗಕ್ಕೆ ವರ್ಗಾವಣೆಗೊಂಡಿದ್ದರು. ನ.3ರಂದು ನ್ಯಾಯಾಧೀಶರ ಅವಧಿ ಮುಕ್ತಾಯಗೊಳ್ಳಲಿದ್ದು, 5ರಂದು ಬೆಳಗಾವಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಪದಗ್ರಹಣ ಮಾಡಲಿದ್ದಾರೆ.
ನ್ಯಾಯಾಧೀಶರು ತಮ್ಮ ಸೇವಾವಧಿಯಲ್ಲಿ ಒಟ್ಟು 10 ರಾಷ್ಟ್ರೀಯ ಲೋಕ ಅದಾಲತ್‌ಗಳನ್ನು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಆಯೋಜಿಸಿ ವಿಚಾರಣಾ ಹಂತದಲ್ಲಿದ್ದ 1,21,499 ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಸಿದ್ದರು.
ವಿವಿಧ ಹುದ್ದೆಗಳಿಗೆ 50ಕ್ಕೂ ಹೆಚ್ಚು ಸಿಬ್ಬಂದಿ ನೇಮಕಾತಿ ಮಾಡಿದ್ದು, ಸೇವೆಯಲ್ಲಿದ್ದ 54 ಸಿಬ್ಬಂದಿ ಸೇವೆ ಪರಿಶೀಲಿಸಿ ಅವರಿಗೆ ಮುಂಬಡ್ತಿ ನೀಡಿದ್ದಾರೆ. ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 69 ಸಿಬ್ಬಂದಿ ತೃಪ್ತಿಕರವಾಗಿ ಪ್ರೊಬೇಷನ್ ಅವಧಿ ಪೂರ್ಣಗೊಳಿಸಿದ್ದಾರೆಂದು ಆದೇಶ ಹೊರಡಿಸಿ ಅಂತಹ ಸಿಬ್ಬಂದಿಯನ್ನು ಸಾರ್ವಜನಿಕ ಸೇವೆಯಲ್ಲಿ ಕಾಯಂಗೊಳಿಸಿ ಆದೇಶಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net