ಮತದಾನದ ಹಕ್ಕನಿಂದ ವಂಚಿತರಾಗದಿರಿ

ಶಿಕಾರಿಪುರ ತಾಲೂಕಿನಲ್ಲಿ ಹಿತ್ಲ ಗ್ರಾಮದಲ್ಲಿ ಏರ್ಪಡಿಸಿದ್ದ ಜನಸಂಪರ್ಕ ಸಭೆಯಲ್ಲಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿದರು. ಕೆ.ಎಸ್.ಗುರುಮೂರ್ತಿ, ಹನುಮಂತಪ್ಪ, ಸಿದ್ಲಿಂಗಪ್ಪ, ಪ್ರತಾಪ್ ಇತರರಿದ್ದರು.
ಶಿಕಾರಿಪುರ ತಾಲೂಕಿನಲ್ಲಿ ಹಿತ್ಲ ಗ್ರಾಮದಲ್ಲಿ ಏರ್ಪಡಿಸಿದ್ದ ಜನಸಂಪರ್ಕ ಸಭೆಯಲ್ಲಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿದರು. ಕೆ.ಎಸ್.ಗುರುಮೂರ್ತಿ, ಹನುಮಂತಪ್ಪ, ಸಿದ್ಲಿಂಗಪ್ಪ, ಪ್ರತಾಪ್ ಇತರರಿದ್ದರು.
Published on
ಶಿಕಾರಿಪುರ: ತಾಲೂಕಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಉತ್ತಮವಾಗಿ ನಡೆಯುತ್ತಿದ್ದು, ಪ್ರತಿಯೊಬ್ಬರೂ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಯಾರೂ ಕೂಡ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ತಾಲೂಕಿನ ಹಿತ್ಲ ಗ್ರಾಮದಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ, ಪಕ್ಷದ ಸಂಘಟನಾ ಸಭೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಎಸ್‌ಐಆರ್ ಕುರಿತು ಎಲ್ಲ ಹೋಬಳಿಗಳಲ್ಲಿ ಜನಸಂಪರ್ಕ ಸಭೆ ನಡೆಸಿದ್ದು, ಜನರ ಸ್ಪಂದನೆ ಚೆನ್ನಾಗಿದೆ. ಪಕ್ಷದ ಕಾರ್ಯಕರ್ತರ ಪರಿಶ್ರಮ ಕೂಡ ಸಾಕಷ್ಟಿದೆ ಎಂದು ತಿಳಿಸಿದರು.
ಕೆಲವು ಕಾರಣಗಳಿಂದ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗಿದ್ದರೆ ಈಗ ಹೆಸರು ಸೇರಿಸಲು ಅವಕಾಶವಿದೆ. ಮತದಾರರ ಪಟ್ಟಿ ಪರಿಷ್ಕರಣೆಯಿಂದ ಯಾರಿಗೂ ತೊಂದರೆಯಾಗುವದಿಲ್ಲ ಎಂದರು.
ಸ್ಥಳೀಯ ಗ್ರಾಮಸ್ಥರು ವಿವಿಧ ಬೇಡಿಕೆ ಹಾಗೂ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸಲ್ಲಿಸಿದರು. ಸಕಾರಾತ್ಮಕವಾಗಿ ಸ್ಪಂದಿಸಿದ ಬಿವೈಆರ್, ಗ್ರಾಮದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಬದ್ಧವಾಗಿದ್ದು, ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವುದಾಗಿ ಭರವಸೆ ನೀಡಿದರು.
ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಮಂಡಲ ಅಧ್ಯಕ್ಷ ಹನುಮಂತಪ್ಪ, ಪ್ರಮುಖರಾದ ಪ್ರತಾಪ್, ಚನ್ನವೀರಪ್ಪ, ಸಿದ್ಲಿಂಗಪ್ಪ, ಬಿ.ಡಿ.ಭೂಕಾಂತ್, ಪ್ರವೀಣ್, ವೀರನಗೌಡ, ರಾಘು ಹಿತ್ಲ, ಅರುಂಧತಿ ರಾಜೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net