ಜೆಡಿಎಸ್ ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷರಾಗಿ ಎಚ್.ಆರ್.ಹನುಮಂತಪ್ಪ ಅಧಿಕಾರ ಸ್ವೀಕರಿಸಿದರು. ಶಾರದಾ ಪೂರ್ಯಾನಾಯ್ಕ, ರಾಮಕೃಷ್ಣ, ಸೋಮಿನಕೊಪ್ಪ ಕಾಂತರಾಜ್, ನರಸಿಂಹ ಗಂಧದಮನೆ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಕಾರ್ಯಕರ್ತರಿಗೆ ಶಾರದಾ ಪೂರ್ಯಾನಾಯ್ಕ ಸಲಹೆ
ಮೈತ್ರಿ ಇರದಿದ್ದರೆ ಏಕಾಂಗಿ ಹೋರಾಟ ಅನಿವಾರ್ಯ
ಪಕ್ಷದ ವೇದಿಕೆಯಲ್ಲಿ ಜೆಡಿಎಸ್ ಶಾಸಕಿ ಅಚ್ಚರಿ ಹೇಳಿಕೆ
ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯಬಹುದು ಇಲ್ಲವೇ ಜೆಡಿಎಸ್ (jds) ಏಕಾಂಗಿಯಾಗಿ ಚುನಾವಣೆ ಎದುರಿಸುವ ತೀರ್ಮಾನವನ್ನು ವರಿಷ್ಠರು ಮಾಡಬಹುದು. ಹೀಗಾಗಿ ಜೆಡಿಎಸ್ ಕಾರ್ಯಕರ್ತರು (workers) ಪಕ್ಷ ಸಂಘಟನೆ ವಿಷಯದಲ್ಲಿ ಮೈಮರೆಯಬಾರದು ಎಂದು ಶಾಸಕಿ ಶಾರದಾ (sharada) ಪೂರ್ಯಾನಾಯ್ಕ ಹೇಳಿದರು.
ಜೆಡಿಎಸ್ ಜಿಲ್ಲಾ ಕಾರ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ಎಸ್‌ಟಿ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ, ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಕಾಂಗ್ರೆಸ್‌ನವರು ಏನು ಬೇಕಾದರೂ ಹೇಳಬಹುದು. ಆದರೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರದಲ್ಲಿ ನಮ್ಮ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಉತ್ತಮ ಖಾತೆ ನೀಡಿದ್ದಾರೆ ಎಂದರು.
ರಾಜ್ಯದಲ್ಲಿ ಜೆಡಿಎಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಕುಮಾರಣ್ಣ ಮತ್ತೆ ಮುಖ್ಯಮಂತ್ರಿ ಆಗಬೇಕೆಂಬುದು ಕಾರ್ಯಕರ್ತರ ಅಭಿಲಾಷೆ. ಈ ಕಾರಣದಿಂದ ಮೈತ್ರಿಯಲ್ಲಿ ಕೆಲವು ಗೊಂದಲಗಳಾಗಬಹುದು. ಹೀಗಾಗಿ ಸ್ವತಂತ್ರವಾಗಿ ಚುನಾವಣೆ ಎದುರಿಸುವುದಕ್ಕೂ ನಾವು ಸಜ್ಜಾಗಿರಬೇಕು ಎಂದು ತಿಳಿಸಿದರು.
ಎನ್‌ಡಿಎ ಜತೆಗಿನ ಮೈತ್ರಿ ಬಗ್ಗೆ ಜೆಡಿಎಸ್‌ನಲ್ಲಿ ತಕರಾರೇನೂ ಇಲ್ಲ. ಮೈತ್ರಿ ಮುಂದುವರಿದರೆ ಸಂತೋಷ. ಇಲ್ಲವಾದಲ್ಲಿ ಸ್ವಂತ ಶಕ್ತಿ ಮೇಲೆ ಚುನಾವಣೆಗಳನ್ನು ಎದುರಿಸುವುದಕ್ಕೆ ಸಿದ್ಧರಾಗಬೇಕಿದೆೆ. ಸ್ಥಳೀಯ ಸಂಸ್ಥೆಗಳು, ನಂತರ ವಿಧಾನಸಭಾ ಚುನಾವಣೆ ಬರುತ್ತವೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಮೈಮರೆತು ಕೂರಬಾರದು. ಪಕ್ಷದ ಸಂಘಟನೆಗೆ ದುಡಿಯಬೇಕು ಎಂದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಿಂದ ಮೂವರು ಜೆಡಿಎಸ್ ಶಾಸಕರು ಆಯ್ಕೆಯಾಗುವ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡಬೇಕು. ರಾಜಕೀಯ ಪಕ್ಷ ಎಂದ ಮೇಲೆ ಸಣ್ಣಪುಟ್ಟ ಗೊಂದಲಗಳು ಸಹಜ. ಯಾರೂ ಅದನ್ನೇ ದೊಡ್ಡದು ಮಾಡಿ ಹಾದಿಬೀದಿಯಲ್ಲಿ ಮಾತನಾಡಬಾರದು. ಪಕ್ಷದ ಚೌಕಟ್ಟಿನೊಳಗೆ ಎಲ್ಲದಕ್ಕೂ ಉತ್ತರ ಕಂಡುಕೊಳ್ಳಬೇಕು. ರಾಜ್ಯ ಸರ್ಕಾರ ಎಸ್‌ಟಿ ಸಮುದಾಯದ ಅಭಿವೃದ್ಧಿಗೆ ಸಹಕಾರ ನೀಡುತ್ತಿಲ್ಲ ಎಂದು ಜೆಡಿಎಸ್ ಎಸ್‌ಟಿ ಘಟಕದ ಅಧ್ಯಕ್ಷ ಎಚ್.ಆರ್.ಹನುಮಂತಪ್ಪ ತಿಳಿಸಿದರು.