

ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇರುವುದಿಲ್ಲ. ಸರ್ಕಾರದ ಮಾರ್ಗಸೂಚಿಯಂತೆ ಗೊಬ್ಬರ ವಿತರಣೆಗೆ ಕ್ರಮ ವಹಿಸಲಾಗಿದೆ. ಕೆರೆಗಳಿಗೆ ನೀರು ತುಂಬುವ ಕಾರ್ಯ ಪ್ರಗತಿಯಲ್ಲಿದೆ. ಸೊರಬ ತಾಲೂಕಿನ ಒಂದು ಗ್ರಾಮದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಒದಗಿಸಲಾಗುತ್ತಿದೆ. ಕೆಲವೆಡೆ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ನೀರನ್ನು ಒದಗಿಸಲಾಗುತ್ತಿದೆ ಡಿಸಿ ಹೇಳಿದರು. ಜಿಲ್ಲೆಯಲ್ಲಿ 280 ಮಳೆ ಮಾಪನ ಕೇಂದ್ರಗಳಿದ್ದು, ಅವುಗಳಲ್ಲಿ ಜನವರಿ ವೇಳೆಗೆ 72 ಯಂತ್ರಗಳು ಮಾತ್ರ ಕ್ರಿಯಾಶೀಲವಾಗಿದ್ದವು. ಪ್ರಸ್ತುತ ಬಹಳಷ್ಟು ಮಳೆಮಾಪನ ಕೇಂದ್ರಗಳನ್ನು ದುರಸ್ತಿಗೊಳಿಸಲಾಗಿದೆ. ಇನ್ನೂ 22 ಮಳೆ ಮಾಪನ ಕೇಂದ್ರಗಳ ದುರಸ್ತಿಯಾಗಬೇಕಿದೆ. ಮುಂದಿನ ಒಂದು ವಾರದೊಳಗಾಗಿ ಸರಿಪಡಿಸಲಾಗುವುದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಸಿದರು.