ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಶಿಕ್ಷಣ ಅವಶ್ಯ

ತುಮರಿ: ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಲು ಶಿಕ್ಷಣ ಅವಶ್ಯ. ಪಾಲಕರು ಬಾಲ್ಯದಲ್ಲೇ ಸಂಸ್ಕಾರ ಕಲಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
School
ತುಮರಿಯಲ್ಲಿ ಇಂದಿರಾಗಾಂಧಿ ವಸತಿ ಶಾಲೆ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಅನಿಲ್‌ಕುಮಾರ್, ನಳಿನಾಕ್ಷಿ, ಓಂಕಾರ್ ಇತರರಿದ್ದರು.
Published on: 

ತುಮರಿ: ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಲು ಶಿಕ್ಷಣ ಅವಶ್ಯ. ಪಾಲಕರು ಬಾಲ್ಯದಲ್ಲೇ ಸಂಸ್ಕಾರ ಕಲಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ತುಮರಿಯಲ್ಲಿ 22 ಕೋಟಿ ರೂ. ವೆಚ್ಚದ ಇಂದಿರಾಗಾಂಧಿ ವಸತಿ ಶಾಲೆ ಕಟ್ಟಡ ಕಾಮಗಾರಿಗೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸ್ಥಳೀಯರಿಗೆ ಅನುಕೂಲ ಒದಗಿಸಲು ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರಾಗಿದ್ದು, ಶಾಲಾ ಕಟ್ಟಡ ಸೇರಿ ಅಗತ್ಯ ಸೌಲಭ್ಯಗಳು ಶೀಘ್ರವೇ ಸಿದ್ಧಗೊಳ್ಳಲಿವೆ. ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಮುಖ್ಯಮಂತ್ರಿ ವಿಶೇಷ ಅನುದಾನದಡಿ ರಸ್ತೆಗಳಿಗೆ ಆದ್ಯತೆ ಮೇರೆಗೆ ಅನುದಾನ ಒದಗಿಸಲಾಗಿದೆ. ಸಿಗಂದೂರು ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಸ್ಥಳೀಯವಾಗಿ ಭದ್ರತೆ ದೃಷ್ಟಿಯಿಂದ ಹಾಗೂ ಕಳ್ಳತನ ಸೇರಿ ಇತರ ಕ್ರಿಮಿನಲ್ ಪ್ರಕರಣಗಳನ್ನು ತಡೆಯಲು ತುಮರಿಯಲ್ಲಿ ಹೊಸ ಪೊಲೀಸ್ ಠಾಣೆ ಆರಂಭಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗಿದೆ. ಮಾರಲಗೋಡು, ಹೆರಬೆಟ್ಟು, ಕಟ್ಟಿನಕಾರು ದುರ್ಗಮ ಪ್ರದೇಶಗಳಿಗೆ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಕೆಡಿಪಿ ಸದಸ್ಯ ಸತ್ಯನಾರಾಯಣ, ಲೋಕೋಪಯೋಗಿ ಇಲಾಖೆ ಎಇಇ ಅನಿಲ್‌ಕುಮಾರ್, ನಾಮನಿರ್ದೇಶಿತ ಸದಸ್ಯ ಗಣೇಶ್, ಹಾಪ್‌ಕಾಮ್ಸ್ ನಿರ್ದೇಶಕ ಅಶೋಕ್ ಬೇಳೂರು, ಕಲಸೆ ಚಂದ್ರಪ್ಪ, ಓಂಕಾರ್ ಜೈನ್, ಗುತ್ತಿಗೆದಾರ ಶ್ರೀನಿವಾಸ ರೆಡ್ಡಿ, ನಳಿನಾಕ್ಷಿ, ವಿ.ಟಿ.ಸ್ವಾಮಿ, ಟಿ.ಪಿ.ರಮೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net