50 ಯೂನಿಟ್ ಹೆಚ್ಚುವರಿ ವಿದ್ಯುತ್‌ಗೆ ಪ್ರಯತ್ನ । Five Guarantees

ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜಿಲ್ಲಾಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಉದ್ಘಾಟಿಸಿದರು. ಎಚ್.ಎಂ.ರೇವಣ್ಣ, ದಿನೇಶ್ ಗೂಳಿಗೌಡ, ಡಾ. ಪುಷ್ಪಾ ಅಮರನಾಥ, ಎಸ್.ಎನ್.ಚನ್ನಬಸಪ್ಪ, ಬಲ್ಕಿಷ್ ಬಾನು, ಆರ್.ಎಂ.ಮಂಜುನಾಥ ಗೌಡ, ಚೇತನ್ ಗೌಡ, ಸಿ.ಎಸ್.ಚಂದ್ರಭೂಪಾಲ್, ಆರ್.ಪ್ರಸನ್ನಕುಮಾರ್, ಡಾ. ಎಚ್.ಪಿ.ವಾಸು, ಎಂ.ಶ್ರೀಕಾಂತ್, ಎಚ್.ಸಿ.ಯೋಗೇಶ್, ಎಸ್.ರವಿಕುಮಾರ್ ಉಪಸ್ಥಿತರಿದ್ದರು.
ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜಿಲ್ಲಾಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಉದ್ಘಾಟಿಸಿದರು. ಎಚ್.ಎಂ.ರೇವಣ್ಣ, ದಿನೇಶ್ ಗೂಳಿಗೌಡ, ಡಾ. ಪುಷ್ಪಾ ಅಮರನಾಥ, ಎಸ್.ಎನ್.ಚನ್ನಬಸಪ್ಪ, ಬಲ್ಕಿಷ್ ಬಾನು, ಆರ್.ಎಂ.ಮಂಜುನಾಥ ಗೌಡ, ಚೇತನ್ ಗೌಡ, ಸಿ.ಎಸ್.ಚಂದ್ರಭೂಪಾಲ್, ಆರ್.ಪ್ರಸನ್ನಕುಮಾರ್, ಡಾ. ಎಚ್.ಪಿ.ವಾಸು, ಎಂ.ಶ್ರೀಕಾಂತ್, ಎಚ್.ಸಿ.ಯೋಗೇಶ್, ಎಸ್.ರವಿಕುಮಾರ್ ಉಪಸ್ಥಿತರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾಮಟ್ಟದ ಕಾರ್ಯಾಗಾರ
  • ಸಿಎಂ ಜತೆ ಮಾತನಾಡುವಂತೆ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ರೇವಣ್ಣಗೆ ಮನವಿ
  • ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿಕೆ
ಶಿವಮೊಗ್ಗ: ರಾಜ್ಯ ಸರ್ಕಾರ ಐದು ಗ್ಯಾರಂಟಿ(Guarantees)ಗಳನ್ನು ಕೊಟ್ಟಿರುವುದು ಪುಕ್ಕಟ್ಟೆಯಲ್ಲ. ಅವು ಬಡವರ ಹಕ್ಕುಗಳು. ಗ್ಯಾರಂಟಿ ಯೋಜನೆಗಳ ಮೂಲಕ ಬಡವರನ್ನು ಸಮಾಜದ ಮುಖ್ಯವಾಹಿನಿಗೆ ಕಾಂಗ್ರೆಸ್ ತರುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಕುವೆಂಪು ರಂಗಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ ಸೇರಿ ವಿವಿಧ ಇಲಾಖೆಗಳು, ಶಿವಮೊಗ್ಗ ಜಿಲ್ಲಾ ಮತ್ತು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಆಶ್ರಯದಲ್ಲಿ ಜಿಲ್ಲಾಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ(Workshop) ಉದ್ಘಾಟಿಸಿ ಮಾತನಾಡಿದರು.
ನಾವೆಲ್ಲ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತೇವೆ. ಆದರೆ ಕಾಂಗ್ರೆಸ್(Congress) ಅಧಿಕಾರಕ್ಕೆ ಬಂದಾಗಿನಿಂದ 1.13 ಲಕ್ಷ ಕೋಟಿ ರೂ.ಗಳನ್ನು ಸಿದ್ದರಾಮಯ್ಯ ಸರ್ಕಾರ ಬಡವರಿಗೆ ನೇರವಾಗಿ ತಲುಪಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲೂ 8,82,78,075 ಫಲಾನುಭವಿಗಳಿಗೆ 3,023.95 ಕೋಟಿ ರೂ. ಪಾವತಿಸಲಾಗಿದೆ ಎಂದರು.
200 ಯೂನಿಟ್‌(Unit)ವರೆಗೆ ಜನರಿಗೆ ಉಚಿತ ವಿದ್ಯುತ್ ಕೊಟ್ಟಿದ್ದೇವೆ. ಆದರೆ ಗೃಹಲಕ್ಷ್ಮಿ (Gruhalakshmi)ಮೂಲಕ ತಲಾ 2 ಸಾವಿರ ರೂ. ಕೊಟ್ಟು ಫ್ರಿಡ್ಜ್ ಮತ್ತು ಮಿಕ್ಸಿಯನ್ನೂ ಕೊಡಿಸಿದ್ದೇವೆ. ಹಾಗಾಗಿ ಬಡವರಿಗೆ ಇನ್ನೂ 50 ಯೂನಿಟ್ ಹೆಚ್ಚುವರಿ ಉಚಿತ ವಿದ್ಯುತ್ ಕೊಡಬೇಕಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತನಾಡಬೇಕು ಎಂದು ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರಿಗೆ ಮನವಿ ಮಾಡಿದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ, ಡಾ. ಪುಷ್ಪಾ ಅಮರನಾಥ, ಶಾಸಕ ಎಸ್.ಎನ್.ಚನ್ನಬಸಪ್ಪ, ಎಂಎಲ್ಸಿ ಬಲ್ಕಿಷ್ ಬಾನು, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್, ಜಿಪಂ ಸಿಇಒ ಎನ್.ಹೇಮಂತ್, ಪ್ರಮುಖರಾದ ಆರ್.ಪ್ರಸನ್ನಕುಮಾರ್, ಡಾ. ಎಚ್.ಪಿ.ವಾಸು, ಎಂ.ಶ್ರೀಕಾಂತ್, ಎಚ್.ಸಿ.ಯೋಗೇಶ್, ಎಸ್.ರವಿಕುಮಾರ್, ಡಾ. ಶ್ರೀನಿವಾಸ ಕರಿಯಣ್ಣ, ಕಲಗೋಡು ರತ್ನಾಕರ್ ಮತ್ತಿತರರು ಉಪಸ್ಥಿತರಿದ್ದರು.

ಚಿನ್ನ-ಬೆಳ್ಳಿ ದರ ಇಳಿಸಲು ಬೇಡಿಕೆ

ಶಿವಮೊಗ್ಗ: ಐದು ಗ್ಯಾರಂಟಿಗಳಿಂದ ಜನರಿಗೆ ಸಾಕಷ್ಟು ಉಪಯೋಗ ಆಗಿದೆ. ಆದರೆ ಚಿನ್ನ(Gold) ಮತ್ತು ಬೆಳ್ಳಿ (Silver) ದರ ಏರಿಕೆ ಆಗುತ್ತಿದ್ದು, ಬಡವರಿಗೆ ಗಗನಕುಸುಮವಾಗಿದೆ. ಹಾಗಾಗಿ ಗ್ಯಾರಂಟಿ ಜತೆ ಚಿನ್ನ, ಬೆಳ್ಳಿ ದರ ಇಳಿಸುವಂತೆ ಮಹಿಳೆಯೊಬ್ಬರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ, ಇದು ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ಕೇಂದ್ರ ಸರ್ಕಾರ ದರ ಕಡಿಮೆಗೆ ಕ್ರಮ ತೆಗೆದುಕೊಳ್ಳಬೇಕು ಎಂದರು. ಇದೇ ವಿಚಾರವಾಗಿ ವೇದಿಕೆಯಲ್ಲೇ ಸಚಿವ ಮಧು ಬಂಗಾರಪ್ಪ ಮತ್ತು ಶಾಸಕ ಎಸ್.ಎನ್.ಚನ್ನಬಸಪ್ಪ ನಡುವೆ ಸ್ವಲ್ಪ ಹೊತ್ತು ವಾಗ್ವಾದವೂ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net