ಕೇಂದ್ರದಿಂದ ಮಹಿಳೆಯರಿಗೆ ಪ್ರೋತ್ಸಾಹ

ಸಾಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಕ್ರೀಡಾಪಟು ಸಿರಿಗೌರಿ ಅವರನ್ನು ಸನ್ಮಾನಿಸಲಾಯಿತು. ಮಧುರಾ ಶಿವಾನಂದ್, ಮೈತ್ರಿ ಪಾಟೀಲ್, ಗಾಯತ್ರಿ ಇತರರಿದ್ದರು.
ಸಾಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಕ್ರೀಡಾಪಟು ಸಿರಿಗೌರಿ ಅವರನ್ನು ಸನ್ಮಾನಿಸಲಾಯಿತು. ಮಧುರಾ ಶಿವಾನಂದ್, ಮೈತ್ರಿ ಪಾಟೀಲ್, ಗಾಯತ್ರಿ ಇತರರಿದ್ದರು.
Published on
ಸಾಗರ: ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸುತ್ತಿದ್ದು, ಕೇಂದ್ರ ಸರ್ಕಾರ ಮಹಿಳೆಯರಿಗೆ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಧುರಾ ಶಿವಾನಂದ್ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾದಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಬಿಜೆಪಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ದ್ರೌಪದಿ ಮುರ್ಮು ಅವರಿಗೆ ರಾಷ್ಟ್ರಪತಿ ಸ್ಥಾನ ಕಲ್ಪಿಸಿದೆ. ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್‌ನಲ್ಲಿ ಸಹ ಮಹಿಳೆಯರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಗರ್ಭಕಂಠ ಕ್ಯಾನ್ಸರ್‌ಗೆ ಕೇಂದ್ರ ಸರ್ಕಾರ ಉಚಿತ ಲಸಿಕೆ ಕೊಡುತ್ತಿದೆ ಎಂದು ತಿಳಿಸಿದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಆರ್.ಗಣೇಶ್‌ಪ್ರಸಾದ್ ಮಾತನಾಡಿ, ಕ್ರೀಡಾಕ್ಷೇತ್ರದ ಸಾಧಕಿ ಸಿರಿಗೌರಿ ಅವರನ್ನು ಸನ್ಮಾನಿಸುತ್ತಿರುವ ಮಹಿಳಾ ಮೋರ್ಚಾದ ಕಾರ್ಯ ಶ್ಲಾಘನೀಯ. ಸಿರಿಗೌರಿ ಅವರು ಹ್ಯಾಂಡ್‌ಬಾಲ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ರಾಜ್ಯ ಪ್ರತಿನಿಧಿಸಿದ್ದಾರೆ. ಕ್ರಿಕೆಟ್‌ನಲ್ಲಿ ಸಂಭಾವನೀಯ ಆಟಗಾರರಾಗಿ, ಟ್ರೆಕ್ಕಿಂಗ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿದ್ದಾರೆ ಎಂದರು.
ಕ್ರೀಡಾಪಟು ಸಿರಿಗೌರಿ ಅವರನ್ನು ಸನ್ಮಾನಿಸಲಾಯಿತು. ಗರ್ಭಕಂಠ ಕ್ಯಾನ್ಸರ್ ಜಾಗೃತಿ ಕುರಿತು ಡಾ. ಶ್ರೇಯಾ ಭಾಗವತ್ ಉಪನ್ಯಾಸ ನೀಡಿದರು. ಬಿಜೆಪಿ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ಗಾಯತ್ರಿ, ಆರ್.ಶ್ರೀನಿವಾಸ್, ಭಾವನಾ ಸಂತೋಷ್, ಪ್ರೇಮಾ ಸಿಂಗ್, ಪದ್ಮಾ ಜೈನ್, ಸುವರ್ಣಾ ಟೀಕಪ್ಪ, ಮೈತ್ರಿ ವಿ.ಪಾಟೀಲ್, ರಂಜನಾ ಸುರೇಶ್, ಕವಿತಾ ಶರತ್, ಶ್ವೇತಾ ಸಂತೋಷ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net