ಶಿವಪುರ ಗ್ರಾಮದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ಸಭಾ ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯ ಗುರುಕುಮಾರ್ ಪಾಟೀಲ್ ಮಾತನಾಡಿದರು. ಸಲೀಂ, ಚಂದ್ರಪ್ಪ ಕತವಾಯಿ, ಅಜೀಮ್ ಇತರರಿದ್ದರು.
ಸೊರಬ: ಗ್ರಾಮೀಣ ಭಾಗದ ಯುವಜನರ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಜಿಪಂ ಮಾಜಿ ಸದಸ್ಯ ಗುರುಕುಮಾರ್ ಪಾಟೀಲ್ ಹೇಳಿದರು.
ತಾಲೂಕಿನ ಶಿವಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶಿವಪುರ ಕತವಾಯಿ ಪ್ರೀಮಿಯರ್ ಲೀಗ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಮಾತನಾಡಿ, ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸದೃಢ ಆರೋಗ್ಯ ಹೊಂದಬಹುದು ಎಂದು ತಿಳಿಸಿದರು.
ಶಿಕ್ಷಕ ಈರಪ್ಪ ದ್ಯಾವನಾಯ್ಕ ಮಾತನಾಡಿ, ಕ್ರೀಡೆಗಳು ಯುವಜನತೆಯನ್ನು ಒಗ್ಗೂಡಿಸುತ್ತದೆ. ಜತೆಗೆ ಅವರಲ್ಲಿ ಶಿಸ್ತು ಮತ್ತು ನಾಯಕತ್ವ ಗುಣ ಬೆಳೆಸುತ್ತವೆ ಎಂದರು.