ಸಂಗೀತ ಕಲೆಗಳ ವಿವಿಯಿಂದ ಪರೀಕ್ಷೆ | Music Exam

ಶಿವಮೊಗ್ಗ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಸಂಗೀತ ಮತ್ತು ಪ್ರದರ್ಶಕ ಕಲೆಗಳ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು.
ಶಿವಮೊಗ್ಗ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಸಂಗೀತ ಮತ್ತು ಪ್ರದರ್ಶಕ ಕಲೆಗಳ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು.
Published on

ಪ್ರಮುಖ ಮುಖ್ಯಾಂಶಗಳು

  • ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿಯಿಂದ ಪರೀಕ್ಷೆ
  • ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಪರೀಕ್ಷೆ ಬರೆದ 835 ಅಭ್ಯರ್ಥಿಗಳು
  • ಜೂನಿಯರ್, ಸೀನಿಯರ್, ವಿದ್ವತ್, ವಿದ್ವತ್‌ಪೂರ್ವ, ವಿದ್ವತ್ ಅಂತಿಮ ವಿಭಾಗಗಳಲ್ಲಿ ಪರೀಕ್ಷೆ
ಶಿವಮೊಗ್ಗ: ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಿಂದ ಸಂಗೀತ(Music), ನೃತ್ಯ, ತಾಳವಾದ್ಯ ಪರೀಕ್ಷೆಗಳು ಭಾನುವಾರ ನಗರದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆದವು.
ವಾಣಿಜ್ಯ ಕಾಲೇಜಿ(Commerce College)ನಲ್ಲಿ 835 ಅಭ್ಯರ್ಥಿಗಳು ಪರೀಕ್ಷೆ ಬರೆದರು. ಸಂಗೀತ, ನೃತ್ಯ, ತಾಳವಾದ್ಯ ಪ್ರಕಾರಗಳಲ್ಲಿ ಜೂನಿಯರ್, ಸೀನಿಯರ್, ವಿದ್ವತ್, ವಿದ್ವತ್‌ಪೂರ್ವ, ವಿದ್ವತ್ ಅಂತಿಮ ವಿಭಾಗಗಳಲ್ಲಿ ಪರೀಕ್ಷೆಗಳು ನಡೆದವು.
ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಸಂಗೀತ(Hindustani music), ಭರತನಾಟ್ಯ, ಕೂಚುಪುಡಿ, ಕಥಕ್, ಮೃದಂಗ, ತಬಲಾ ಪರೀಕ್ಷೆಗಳು ಒಳಗೊಂಡಿದ್ದವು. 30 ಕೊಠಡಿಗಳಲ್ಲಿ ಪರೀಕ್ಷೆ ನಡೆದಿದ್ದು, 20ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net