ತಾಲೂಕು ಆಸ್ಪತ್ರೆಗೆ ಶೀಘ್ರ ಸೌಲಭ್ಯ | Appeal to minister

ಶಿಕಾರಿಪುರ ಸರ್ಕಾರಿ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶಾಸಕ ವಿಜಯೇಂದ್ರ ಅವರು ಸಚಿವ ಯು.ಟಿ.ಖಾದರ್ ಅವರಿಗೆ ಮನವಿ ಸಲ್ಲಿಸಿದರು.
ಶಿಕಾರಿಪುರ ಸರ್ಕಾರಿ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶಾಸಕ ವಿಜಯೇಂದ್ರ ಅವರು ಸಚಿವ ಯು.ಟಿ.ಖಾದರ್ ಅವರಿಗೆ ಮನವಿ ಸಲ್ಲಿಸಿದರು.
Published on
ಶಿಕಾರಿಪುರ: ತಾಲೂಕು ಆಸ್ಪತ್ರೆ, ತಾಯಿ-ಮಗು ಆಸ್ಪತ್ರೆಯಲ್ಲಿ ಇನ್ನಷ್ಟು ಗುಣಮಟ್ಟದ ಸೇವೆ ಒದಗಿಸುವ ಸಲುವಾಗಿ ಮೂಲ ಸೌಲಭ್ಯ ಹೆಚ್ಚಿಸಬೇಕು ಎಂದು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ಶುಕ್ರವಾರ ಬೆಂಗಳೂರಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಹಾಗೂ ಬಾಕಿ ಇರುವ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸಿ ಇಲಾಖೆಗೆ ಹಸ್ತಾಂತರಗೊಳಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಕಟ್ಟಡ ಹಸ್ತಾಂತರ ಬಳಿಕ ರಕ್ತ ನಿಧಿ ಸ್ಥಾಪನೆಗೆ ಉಪಕರಣ, ಸಿಬ್ಬಂದಿಯನ್ನು ಅವಶ್ಯಕತೆಗೆ ಅನುಗುಣವಾಗಿ ಒದಗಿಸುವುದಾಗಿ ಭರವಸೆ ನೀಡಿದರು.
ಆಸ್ಪತ್ರೆಗೆ ಒಂದು ಹೆಚ್ಚುವರಿ ಆಂಬುಲೆನ್ಸ್ ನೀಡುವಂತೆ. ಆಸ್ಪತ್ರೆಗೆ ತುರ್ತಾಗಿ ಅವಶ್ಯವಿರುವ ನೇತ್ರ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇರೆಗೆ ಒದಗಿಸಿಲು ಡಿಎಚ್‌ಒ ಅವರಿಗೆ ಸೂಚಿಸಿದರು. ಆಸ್ಪತ್ರೆಯ ಕಾಮಗಾರಿಗೆ ಅವಶ್ಯವಿರುವ ಅನುದಾವನ್ನು ಶೀಘ್ರವೇ ಹಣಕಾಸು ಇಲಾಖೆಯ ಅನುಮೋದನೆ ಪಡೆದು ಒದಗಿಸುವುದಾಗಿ ತಿಳಿಸಿದರು.
ಆರೋಗ್ಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ  ಹೃತ್ವಿಕ್ ರಂಜನ್ ಪಾಂಡೆ, ಆಯುಕ್ತ ಗುರುದತ್ ಹೆಗಡೆ, ನಿರ್ದೇಶಕಿ ಡಾ. ರಜನಿ, ಜಂಟಿ ನಿರ್ದೇಶಕ ಡಾ. ನಾಗರಾಜ್, ಉಪನಿರ್ದೇಶಕ ಡಾ. ಸತೀಶ್, ಶಿಕಾರಿಪುರ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ನಿರಂಜನ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net