ಪುರಾತನ ಕಾಲದಿಂದಲೂ ಹೆಣ್ಣಿಗೆ ಪ್ರಮುಖ ಸ್ಥಾನಮಾನವಿದೆ. ನಾರಿಯೊಬ್ಬಳು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತಿನಲ್ಲಿ ಅತಿಶಯೋಕ್ತಿಯಿಲ್ಲ. ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ರಾಜಕೀಯ, ಕ್ರೀಡೆ, ಸಿನಿಮಾ, ವೈದ್ಯಕೀಯ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ. ಆತ್ಮವಿಶ್ವಾಸದ ಪ್ರತೀಕವಾಗಿ ಮಹಿಳೆ ಬೆಳೆಯುತ್ತಿದ್ದಾಳೆ ಮತ್ತು ಬೆಳಗುತ್ತಿದ್ದಾಳೆ ಎಂದು ತಿಳಿಸಿದರು.