ಭದ್ರೆಗಾಗಿ ಶಿವಮೊಗ್ಗದಲ್ಲಿ ಮುಂದುವರಿದ ರೈತರ ಪ್ರತಿಭಟನೆ farmars protest

ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶದ ಎಡ ಮತ್ತು ಬಲ ದಂಡೆ ನಾಲೆಗಳಿಗೆ ಕನಿಷ್ಠ 20 ದಿನ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಭದ್ರಾ ಅಚ್ಚುಕಟ್ಟು ಪ್ರದೇಶದ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಗುರುವಾರವೂ ಮುಂದುವರಿಯಿತು. ಆಕ್ರೋಶಗೊಂಡ ರೈತರು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆಗ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹರಸಾಹಸಪಡಬೇಕಾಯಿತು.
 farmars protest
ಭದ್ರಾ ನಾಲೆಯಲ್ಲಿ ನೀರು ಹರಿಸುವಂತೆ ಆಗ್ರಹಿಸಿ ಸಚಿವ ಮಧು ಬಂಗಾರಪ್ಪ ಕಚೇರಿಗೆ ಮುತ್ತಿಗೆ ಹಾಕಲು ಆಗಮಿಸಿದ್ದ ರೈತರು.
Published on: 

ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶದ ಎಡ ಮತ್ತು ಬಲ ದಂಡೆ ನಾಲೆಗಳಿಗೆ ಕನಿಷ್ಠ 20 ದಿನ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಭದ್ರಾ ಅಚ್ಚುಕಟ್ಟು ಪ್ರದೇಶದ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಗುರುವಾರವೂ ಮುಂದುವರಿಯಿತು. ಆಕ್ರೋಶಗೊಂಡ ರೈತರು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆಗ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹರಸಾಹಸಪಡಬೇಕಾಯಿತು.

ನೀರು ಬಿಡುಗಡೆ ಮಾಡುವ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಅಚ್ಚುಕಟ್ಟು ವ್ಯಾಪ್ತಿಯ ಅಡಿಕೆ ತೋಟಗಳು ಒಣಗುತ್ತಿದ್ದು, ರೈತರು ಸಂಕಷ್ಟ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ರೈತರ ಸಮಸ್ಯೆಗೆ ಸ್ಪಂದಿಸಿ ಎರಡೂ ನಾಲೆಗಳಿಗೆ ನೀರು ಹರಿಸಬೇಕೆಂದು ಆಗ್ರಹಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಆಡಳಿತ ವರ್ಗದ ವಿರುದ್ಧವೂ ಅಸಮಾಧಾನ ಹೊರಹಾಕಿದರು. ನೀರಿಗಾಗಿ ಹೋರಾಟ ತೀವ್ರಗೊಳಿಸಿರುವ ರೈತರು, ಉಪವಾಸ ಸತ್ಯಾಗ್ರಹಕ್ಕೂ ಮುಂದಾಗಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಡಿಸಿ ಕಚೇರಿ ಸುತ್ತಮುತ್ತ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.