ಕೆಎಸ್‌ಒಯು ಪ್ರಾದೇಶಿಕ ನಿರ್ದೇಶಕನ ವಿರುದ್ಧ ಎಫ್‌ಐಆರ್ ! KSOU

ಶಿವಮೊಗ್ಗ: ಸಾಮೂಹಿಕ ನಕಲು ಮಾಡಲು ಅವಕಾಶ ಮಾಡಿಕೊಟ್ಟ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‌ಒಯು) ಶಿವಮೊಗ್ಗ ಪ್ರಾದೇಶಿಕ ಕಚೇರಿಯ ನಿರ್ದೇಶಕ(ಪ್ರಭಾರ)ರಾಗಿದ್ದ ಬಿ.ಎಂ.ಸ್ವಾಮಿ ಸೇರಿದಂತೆ ಸಿಬ್ಬಂದಿ ವಿರುದ್ಧ ತನಿಖೆ ನಡೆಸುವಂತೆ ವಿವಿಯ ಕುಲಸಚಿವ ಪ್ರೊ. ಎಂ.ಪಿ.ಸದಾಶಿವ ಅವರು ತುಂಗಾನಗರ ಠಾಣೆಗೆ ದೂರು ನೀಡಿದ್ದಾರೆ.
KSOU
ಕೆಎಸ್‌ಒಯು ಶಿವಮೊಗ್ಗ ಪ್ರಾದೇಶಿಕ ಕಚೇರಿ.
Published on: 

ಶಿವಮೊಗ್ಗ: ಸಾಮೂಹಿಕ ನಕಲು ಮಾಡಲು ಅವಕಾಶ ಮಾಡಿಕೊಟ್ಟ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‌ಒಯು) ಶಿವಮೊಗ್ಗ ಪ್ರಾದೇಶಿಕ ಕಚೇರಿಯ ನಿರ್ದೇಶಕ(ಪ್ರಭಾರ)ರಾಗಿದ್ದ ಬಿ.ಎಂ.ಸ್ವಾಮಿ ಸೇರಿದಂತೆ ಸಿಬ್ಬಂದಿ ವಿರುದ್ಧ ತನಿಖೆ ನಡೆಸುವಂತೆ ವಿವಿಯ ಕುಲಸಚಿವ ಪ್ರೊ. ಎಂ.ಪಿ.ಸದಾಶಿವ ಅವರು ತುಂಗಾನಗರ ಠಾಣೆಗೆ ದೂರು ನೀಡಿದ್ದಾರೆ.

ವಿವಿಯು ಶಿವಮೊಗ್ಗ ಆಲ್ಕೋಳ ಸಮೀಪ ಪ್ರಾದೇಶಿಕ ಕಚೇರಿ ತೆರೆದು ದೂರು ಮತ್ತು ಸಂಪರ್ಕ ಮಾಧ್ಯಮಗಳ ಮೂಲಕ ಉನ್ನತ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದೆ. ಪ್ರಸಕ್ತ ಸೆಪ್ಟೆಂಬರ್/ಅಕ್ಟೋಬರ್ ಮಾಹೆಯಲ್ಲಿ ವಿವಿಧ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದ್ದು, ಪ್ರಾದೇಶಿಕ ಕಚೇರಿಯ ನಿರ್ದೇಶಕರಾಗಿದ್ದ ಬಿ.ಎಂ.ಸ್ವಾಮಿ ಅವರನ್ನು ಪರೀಕ್ಷಾ ಮುಖ್ಯ ಅಧೀಕ್ಷಕರನ್ನಾಗಿ ನಿಯೋಜಿಸಲಾಗಿತ್ತು.

ಆದರೆ ಇತ್ತೀಚೆಗೆ ನಡೆದ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಮೊಬೈಲ್, ಪಠ್ಯಪುಸ್ತಕ ಮೂಲಕ ಸಾಮೂಹಿಕ ನಕಲು ಮಾಡಲು ಅವಕಾಶ ಮಾಡಿಕೊಟ್ಟ ಬಗ್ಗೆ ವಿಡಿಯೋಗಳು ಮಾಧ್ಯಮಗಳಲ್ಲಿ ಹರಿದಾಡಿದ್ದವು.

ಈ ಸಂಬಂಧ ಬಿ.ಎಂ.ಸ್ವಾಮಿ ಅವರನ್ನು ಪ್ರಾದೇಶಿಕ ನಿರ್ದೇಶಕ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿತ್ತು. ಆದರೂ ಪರೀಕ್ಷೆ ವೇಳೆ ಸಾಮೂಹಿಕ ನಕಲು ಮಾಡುವುದಕ್ಕೆ ಅವಕಾಶ ಕಲ್ಪಿಸಿದ ಸಂಬಂಧ ಬಿ.ಎಂ.ಸ್ವಾಮಿ ಮತ್ತು ಕಚೇರಿ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ತುಂಗಾನಗರ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.