ಮಲೆನಾಡಿನ ಗ್ರಾಮೀಣ ಕ್ರೀಡೆಯಾಗಿರುವ ಕೆರೆಬೇಟೆಯಲ್ಲಿ ಪಾಲ್ಗೊಳ್ಳುವವರು ಏಕಕಾಲದಲ್ಲಿ ಕೆರೆಗೆ ಇಳಿದು ಮೀನುಗಳನ್ನು ಹಿಡಿಯುವುದನ್ನು ನೋಡಲು ನೂರಾರು ಜನ ಆಗಮಿಸುತ್ತಾರೆ. ಗ್ರಾಮದಲ್ಲಿ ಒಂದು ಕೂಣಿಗೆ 600 ರೂ. ನಿಗದಿ ಮಾಡಲಾಗಿತ್ತು. ಮಳೆಗಾಲದ ಸಂದರ್ಭ ಕೆರೆಗಳಿಗೆ ಮೀನಿನ ಮರಿಗಳನ್ನು ಬಿಡಲಾಗುತ್ತದೆ. ನಂತರ ಬೇಸಿಗೆಯಲ್ಲಿ ಕೆರೆಗಳು ಬತ್ತಿದಾಗ ಕೆರೆಬೇಟೆ ಸಾರಲಾಗುತ್ತದೆ.