ಸಂಸ್ಕೃತಿಯ ಪ್ರತೀಕ ಜಾನಪದ | Folk Festival

ರಿಪ್ಪನ್‌ಪೇಟೆಯಲ್ಲಿ ಆಯೋಜಿಸಿದ್ದ ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಂದ ಜೋಗತಿ ನೃತ್ಯ.
ರಿಪ್ಪನ್‌ಪೇಟೆಯಲ್ಲಿ ಆಯೋಜಿಸಿದ್ದ ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಂದ ಜೋಗತಿ ನೃತ್ಯ.
Published on
ರಿಪ್ಪನ್‌ಪೇಟೆ: ಜಾನಪದ ನಮ್ಮ ಉಸಿರು ಮಲೆನಾಡಿನಲ್ಲಿ ಜಾನಪದ ಉಳಿಸಿ ಬೆಳೆಸುವ ಮನಸ್ಸುಗಳು ಬೇಕು. ಜನರ ಬದುಕಿನ, ಪರಿಸರದ ಭಾವನೆಗಳನ್ನು ವ್ಯಕ್ತಪಡಿಸಿಕೊಂಡು ಬರುವುದೇ ಜಾನಪದ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ ತಿಳಿಸಿದರು.
ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕರ್ನಾಟಕ ಜಾನಪದ ಪರಿಷತ್ ಹೊಸನಗರ ಘಟಕ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಭಾನುವಾರ ಏರ್ಪಡಿಸಿದ್ದ ಜಾನಪದ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿಂದಿನ ಕಾಲದಲ್ಲಿ ಸಂವಹನಕ್ಕೆ ಸೂಕ್ತ ವ್ಯವಸ್ಥೆ ಇಲ್ಲದಿದ್ದಾಗ ಜನರ ಅರಿವಿನ ಭಾಗವಾಗಿದ್ದ ಜಾನಪದ ಇಂದು ನಮ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಗತಕಾಲದಿಂದ ನಮಗೆ ಬಳುವಳಿಯಾಗಿ ಬಂದ ಪರಂಪರೆಯನ್ನು ಮುಂದಿನ ತಲೆಮಾರಿಗೂ ಪರಿಚಯಿಸುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ ಎಂದರು.
ಜಾನಪದ ಕಲೆಗಳ ಸ್ಪರ್ಧೆಯಲ್ಲಿ ವಿವಿಧ ಶಾಲೆ ವಿದ್ಯಾರ್ಥಿಗಳು ಗೀತೆ ಗಾಯನ, ನೃತ್ಯ, ಭಜನೆ ಹಲವು ಪ್ರಕಾರಗಳನ್ನು ಪ್ರದರ್ಶಿಸಿದರು.
ಪ್ರಾಚಾರ್ಯ ಡಾ. ಬಿ.ಎಲ್.ರಾಜು, ಸಿಡಿಸಿ ಅಧ್ಯಕ್ಷ ಶ್ರೀನಿವಾಸ ಆಚಾರ್, ಜಾನಪದ ಪರಿಷತ್ ಹೊಸನಗರ ತಾಲೂಕು ಅಧ್ಯಕ್ಷ ಎಂ.ಎಂ.ಪರಮೇಶ್ವರ, ತ.ಮ.ನರಸಿಂಹ, ಎನ್.ಮಂಜುನಾಥ ಕಾಮತ್, ನಗರ ರಾಘವೇಂದ್ರ, ವಿಜೇಂದ್ರ ಶೇಟ್, ಎಂ.ಕುಮಾರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net