ಪಿಯು ವಿದ್ಯಾರ್ಥಿಗಳಿಗೆ ಮುಂದೆ ಉಚಿತ ನೋಟ್‌ಬುಕ್ | free notebook

ಶಿವಮೊಗ್ಗ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವ ಮಧು ಬಂಗಾರಪ್ಪ. ಬಿಇಒ ರಮೇಶ್ ಇದ್ದರು.
ಶಿವಮೊಗ್ಗ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವ ಮಧು ಬಂಗಾರಪ್ಪ. ಬಿಇಒ ರಮೇಶ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ
  • ಹಂತ ಹಂತವಾಗಿ ರಾಜ್ಯದ ಎಲ್ಲ ಶಾಲೆ, ಪಿಯು ಕಾಲೇಜುಗಳಲ್ಲಿಯೂ ಗುಣಮಟ್ಟದ ಶಿಕ್ಷಣ
  • ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ
ಶಿವಮೊಗ್ಗ: ಬಜೆಟ್‌ನಲ್ಲಿ ಪ್ರಕಟಿಸಿದಂತೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಿದ್ದು, ಮುಂದಿನ ದಿನಗಳಲ್ಲಿ ನೋಟ್‌ಬುಕ್‌ಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ(Minister Madhu Bangarappa) ಹೇಳಿದರು.
ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿ(Govt Undergraduate College

)ಗೆ ಶನಿವಾರ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯ. ಆದರೆ ಎಲ್ಲವನ್ನೂ ಒಮ್ಮೆಲೆ ಮಾಡಲಾಗುವುದಿಲ್ಲ. ಹಂತ ಹಂತವಾಗಿ ರಾಜ್ಯದ ಎಲ್ಲ ಶಾಲೆ, ಪಿಯು ಕಾಲೇಜುಗಳಲ್ಲಿಯೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುತ್ತೇವೆ ಎಂದರು.

ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆ(Educational activity), ಕಾಲೇಜಿನಲ್ಲಿ ತಾವು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಹೇಳಿಕೊಂಡರೆ ಅದನ್ನು ತಕ್ಷಣ ಪರಿಶೀಲಿಸಿ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ಶಾಲೆಗಳ ಸಮಗ್ರ ನಿರ್ವಹಣೆ

ರಾಜ್ಯದ ಸರ್ಕಾರಿ ಶಾಲೆಗಳ ಸಮಗ್ರ ನಿರ್ವಹಣೆ(Comprehensive management of government schools)ಗೆ ಸರ್ಕಾರ ಈಗಾಗಲೇ ಅಗತ್ಯ ಹಣಕಾಸಿನ ಸೌಲಭ್ಯಗಳನ್ನು ನಿಗದಿಪಡಿಸಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಶಾಲೆಗಳಲ್ಲಿ ಮೂಲಸೌಕರ್ಯ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ತೊಡಕುಗಳಿದ್ದರೆ ತಕ್ಷಣ ಪರಿಹಾರ ಕಲ್ಪಿಸಲಾಗುವುದು ಎಂದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸೂಕ್ತ ಬಸ್ ಸೌಕರ್ಯ ಒದಗಿಸಿಲ್ಲ ಹಾಗೂ ಅಗತ್ಯ ಶಿಕ್ಷಕರ ನೇಮಕಾತಿ ಮಾಡಿಲ್ಲ. ಆಡಳಿತಾತ್ಮಕ ವೈಫಲ್ಯಗಳ ಹೊರೆ ಈಗ ಸರ್ಕಾರದ ಮೇಲೆ ಬೀಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net