ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ | Free Textbook

ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿದರು. ಆಯನೂರು ಮಂಜುನಾಥ್,  ಚೇತನ್ ಗೌಡ ಇದ್ದರು.
ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿದರು. ಆಯನೂರು ಮಂಜುನಾಥ್, ಚೇತನ್ ಗೌಡ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ಮಹತ್ವದ ನಿರ್ಣಯ
  • ಗುಣಮಟ್ಟದ ಶೂ-ಸಾಕ್ಸ್ ಒದಗಿಸಲು ರಾಜ್ಯಮಟ್ಟದಲ್ಲಿ ಟೆಂಡರ್ ಪ್ರಕ್ರಿಯೆ
  • ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ
ಶಿವಮೊಗ್ಗ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ನೀಡಲು ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ(Minister Madhu Bangarappa) ಹೇಳಿದರು.
ಶಾಲಾ ದಾಖಲಾತಿಯಲ್ಲಿ ಮಕ್ಕಳ ಸಂಖ್ಯೆಯಲ್ಲಿ ತೀವ್ರ ಪ್ರಮಾಣದ ಹೆಚ್ಚಳವಾಗಿದ್ದರಿಂದ ಪಠ್ಯಪುಸ್ತಕ ಪೂರೈಕೆ(Textbook supply)ಯಲ್ಲಿ ಅಲ್ಪಪ್ರಮಾಣದ ವ್ಯತ್ಯಯ ಉಂಟಾಗಿದ್ದು, ಶೀಘ್ರದಲ್ಲಿ ಸಮಸ್ಯೆ ಪರಿಹಾರವಾಗಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಕ್ಕಳಿಗೆ ಗುಣಮಟ್ಟದ ಶೂ-ಸಾಕ್ಸ್(Quality shoe-socks) ಒದಗಿಸಲು ರಾಜ್ಯಮಟ್ಟದಲ್ಲಿ ಟೆಂಡರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಈ ವರ್ಷದಿಂದಲೇ ಉಚಿತ ಪಠ್ಯಪುಸ್ತಕವನ್ನು ವಿತರಿಸಲಾಗುತ್ತಿದೆ. ಗ್ರಾಮೀಣ ಮಕ್ಕಳಿಗೆ ನಗರ ಜೀವನವನ್ನು ಪರಿಚಯಿಸುವ ಸದುದ್ದೇಶದಿಂದ ವಿನೂತನ ಕಾರ್ಯಕ್ರಮ ಆಯೋಜಿಸಿದ್ದು, ಶೀಘ್ರದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗದಲ್ಲೇ ಕೆಪಿಎಸ್ ಉದ್ಘಾಟನೆ: ಕರ್ನಾಟಕ ಪಬ್ಲಿಕ್ ಶಾಲೆ(Karnataka Public School)(ಕೆಪಿಎಸ್)ಗಳ ಉದ್ಘಾಟನೆ ಮತ್ತು ಜಿಲ್ಲೆಯ ವಿವಿಧ ಇಲಾಖೆಗಳ ಕೋಟ್ಯಂತರ ರೂ.ಗಳ ವೆಚ್ಚದ ಯೋಜನೆಗಳ ರಾಜ್ಯಮಟ್ಟದ ಕಾರ್ಯಕ್ರಮವನ್ನು ಶಿವಮೊಗ್ಗ ನಗರ ಕೇಂದ್ರದಲ್ಲೇ ನಡೆಸಲು ಉದ್ದೇಶಿಸಿದ್ದು, ಮುಖ್ಯಮಂತ್ರಿಗಳ ದಿನಾಂಕ ನಿಗದಿ ನಂತರ ನಗರದ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಲಾಗುವುದು ಎಂದು ಹೇಳಿದರು.
ಕೆಪಿಎಸ್‌ಗಳಲ್ಲಿ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದ್ದ ಅವಧಿಯಲ್ಲೂ ರಾಜ್ಯದೆಲ್ಲೆಡೆ ಕೆಪಿಎಸ್‌ಗೆ ನಿಗದಿಪಡಿಸಿದ ಸಂಖ್ಯೆಗಿಂತ ಹೆಚ್ಚಿನ ಪ್ರಮಾಣದ ಮಕ್ಕಳ ದಾಖಲಾತಿ(Child registration) ಕಂಡುಬಂದಿದೆ. ಈ ಹಿಂದೆ ನಿಗದಿಪಡಿಸಿದ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕೆಪಿಎಸ್‌ಗಳನ್ನು ಆರಂಭಿಸಲು ಉದ್ದೇಶಿಸಿದ್ದು, ಡಿಪಿಆರ್(DPR)(ವಿಸೃತ ಯೋಜನಾ ವರದಿ) ಪ್ರಕ್ರಿಯೆ ಚಾಲನೆಯಲ್ಲಿದೆ. ಪ್ರತಿ ಕೆಪಿಎಸ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು 3-9 ಕೋಟಿ ರೂ.ಗಳ ವ್ಯಯ ಮಾಡಲಾಗುವುದು. ಅಲ್ಲದೇ ಶಾಲಾ ಶಿಕ್ಷಣ ವ್ಯವಸ್ಥೆಗೆ ಅಗತ್ಯವಾಗಿರುವ ಪಠ್ಯ, ಕ್ರೀಡೆ, ಸಂಗೀತ ಸೇರಿ ಎಲ್ಲ ಶಿಕ್ಷಕರನ್ನು ನೇಮಿಸಲಾಗುವುದು. ಅಂತೆಯೇ ಶಾಲಾ ಮಕ್ಕಳಿಗೆ ಬಸ್ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.  
"

ಸಮಾಜಕ್ಕೆ ನೀಡುವ ನಿಸ್ವಾರ್ಥ ಸೇವೆ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವನ್ನು ಗೌರವಿಸುವ ಉದ್ದೇಶದಿಂದ ವೈದ್ಯರಿಗೆ ‘ಡಾ.’ ಹಾಗೂ ಪ್ರಾಧ್ಯಾಪಕರಿಗೆ ‘ಪ್ರೊ.’ ಎಂದು ಕರೆಯುವಂತೆ 4.5 ಲಕ್ಷಕ್ಕೂ ಅಧಿಕ ಶಿಕ್ಷಕರಿಗೆ ಅವರ ಹೆಸರಿನ ಮುಂದೆ ‘ಟಿಆರ್’(TR) ಎಂಬ ಗೌರವಸೂಚಕ ಪೂರ್ವಪ್ರತ್ಯಯ ಬಳಸಲು ಅಧಿಕೃತ ಅನುಮತಿ ನೀಡಿ ಸರ್ಕಾರ ಗೌರವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net