ಹಾನಿಗೊಳಗಾಗಿದ್ದ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರಿಗೆ ಸಾಂತ್ವನ
ಹೊಳೆಹೊನ್ನೂರು: ಗಾಳಿಮಳೆಯಿಂದ ಅಡಿಕೆ ತೋಟಗಳಿಗೆ ಹಾನಿ ಆಗಿರುವುದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಲಾಗುವುದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾವೇಂದ್ರ ಹೇಳಿದರು.
ಶಿವಮೊಗ್ಗ ಗ್ರಾಮಾಂತರ ೇತ್ರಕ್ಕೆ ಒಳಪಡುವ ಹೊಳೆಹೊನ್ನೂರಿನ ಹಲವು ಭಾಗಗಳಲ್ಲಿ ಗಾಳಿಮಳೆಯಿಂದ ಹಾನಿಗೊಳಗಾಗಿದ್ದ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರಿಗೆ ಸಾಂತ್ವನ ಹೇಳಿ ಮಾತನಾಡಿ, ಹೋಬಳಿ ವ್ಯಾಪ್ತಿಯಲ್ಲಿ ಅಡಿಕೆ ತೋಟಗಳು ಸಂಪೂರ್ಣವಾಗಿ ನೆಲಕಚ್ಚಿವೆ. ಸರ್ಕಾರದ ಮಟ್ಟದಲ್ಲಿ ಶಕ್ತಿ ಮೀರಿ ಪ್ರಯತ್ನಿಸಿ ಪರಿಹಾರ ಕಲ್ಪಿಸಲಾಗುವುದು ಎಂದರು.
ಮರಬಿದ್ದು ಹಾನಿಯಾಗಿರುವುದರಿಂದ ಬಹುತೇಕ ಗ್ರಾಮಗಳಲ್ಲಿ 4&5 ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸ್ಥಳಿಯ ಗ್ರಾಪಂಗಳು ತಾತ್ಕಾಲಿಕ ನೀರಿನ ವ್ಯವಸ್ಥೆ ಮಾಡಿಕೊಂಡಿವೆ. 10 ಗ್ರಾಪಂ ವ್ಯಾಪ್ತಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಧಿಕಾರಿಗಳು ಪ್ರತಿ ಸರ್ವೇ ನಂಬರ್ಗೂ ಭೇಟಿ ನೀಡುವರು ಎಂದು ತಿಳಿಸಿದರು.
ಮಾಜಿ ಶಾಸಕ ಅಶೋಕ್ ನಾಯ್ಕ್ ಮಾತನಾಡಿ, ಹಾನಿಯಾಗಿರುವ ಮನೆಗಳನ್ನು ಪರಿಶೀಲಿಸಿ ಪರಿಹಾರ ನೀಡಿದರೆ ಸಂತ್ರಸ್ತರು ಮನೆಗಳನ್ನು ರಿಪೇರಿ ಮಾಡಿಕೊಳ್ಳುತ್ತಾರೆ. ತೋಟಗಳಲ್ಲಿ ಸರ್ವೇ ಕಾರ್ಯ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಸರ್ವೇಯಲ್ಲಿ ಯಾವುದೇ ಕಾರಣಕ್ಕೂ ದೋಷವಾಗಬಾರದು ಎಂದರು.