ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಿಂದೆ ಜಾರ್ಜ್ ಕುತಂತ್ರ | Sharavathi Pumped Storage
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ನಿಯಾಸ್‌ನಿಂದ ವರದಿ ತರಿಸಿಕೊಂಡು ಯೋಜನೆ ಅನುಷ್ಠಾನಕ್ಕೆ ಕೆಪಿಸಿಎಲ್ ತಯಾರಿ
ಸಾರ್ವಜನಿಕರು, ನ್ಯಾಯಾಲಯಕ್ಕೆ ತಪ್ಪು ಮಾಹಿತಿ ಮೂಲಕ ದಿಕ್ಕು ತಪ್ಪಿಸುವ ಕೆಲಸ
ಶಿವಮೊಗ್ಗದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಗಂಭೀರ ಆರೋಪ
ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್(Sharavathi Pumped Storage) ಯೋಜನೆ ಕುರಿತು ನಿಯಾಸ್ ನೀಡಿರುವ ವರದಿಯಿಂದ ಕೆಪಿಸಿಎಲ್(ಕರ್ನಾಟಕ ವಿದ್ಯುತ್ ನಿಗಮ ನಿಯಮಿತ)ನವರು ಸಾರ್ವಜನಿಕರು ಮತ್ತು ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡುವ ಮೂಲಕ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದು, ಅದರ ಹಿಂದೆ ಇಂಧನ ಸಚಿವ ಕೆ.ಜಿ.ಜಾರ್ಜ್ ಕುತಂತ್ರವಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ(K.S.Eshwarappa) ಗಂಭೀರ ಆರೋಪ ಮಾಡಿದರು.
ಕೆಪಿಸಿಎಲ್‌ನವರು ನಿಯಾಸ್ ವರದಿ(NIAS Report) ತರಿಸಿಕೊಂಡು ಯೋಜನೆ ಅನುಷ್ಠಾನಕ್ಕೆ ತಯಾರಿ ನಡೆಸಿದ್ದಾರೆ. ಸಚಿವ ಜಾರ್ಜ್(Minister George) ಅವರು ಕೆಪಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಕೆಪಿಸಿ ಬಳಸಿಕೊಂಡು ಕೋಟಿ ಕೋಟಿ ರೂ. ಲೂಟಿ ಮಾಡಲು ಹೊರಟಿದ್ದಾರೆ. ಅವರ ಕುಮ್ಮಕ್ಕಿನಿಂದಲೇ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ತೆರೆಮರೆಯಲ್ಲಿ ಸಿದ್ಧತೆ ನಡೆಸಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ವಾಸ್ತವವಾಗಿ ನಿಯಾಸ್ ಎಂಬುದು ಸಂಸ್ಥೆಯೇ ಅಲ್ಲ, ಅದೊಂದು ಸೊಸೈಟಿಯಾಗಿದೆ. ಆದರೂ ರಾಜ್ಯ ಸರ್ಕಾರವೇ ನಿಯಸ್ ಅನ್ನು ನಿಯೋಜಿಸಿ ವರದಿ ತರಿಸಿಕೊಂಡಿದೆ. ಕೇಂದ್ರ ಸರ್ಕಾರದ ಅನುಮತಿ ಇಲ್ಲದಿದ್ದರೂ ತರಾತುರಿಯಲ್ಲಿ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಆದರೆ ಯಾವುದೇ ಕಾರಣಕ್ಕೂ ಯೋಜನೆ ಜಾರಿಗೆ ನಾವು ಬಿಡುವುದಿಲ್ಲ. ಪರಿಸರವಾದಿಗಳು(Environmentalists), ಸಾಧುಸಂತರು, ಆ ಭಾಗದ ಸಾರ್ವಜನಿಕರು ಒಳಗೊಂಡಂತೆ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಈಗಾಗಲೇ 76 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಸರ್ಕಾರ ಮಾತ್ರ ಯೋಜನೆ ಜಾರಿಗೆ ಮುಂದಾಗಿರುವುದು ವಿಪರ್ಯಾಸವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.