ಭೂಮಾಲೀಕರಿಗೆ ನ್ಯಾಯಯುತ ಪರಿಹಾರ ಕೊಡಿ | Road Widening

ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ವಿತರಿಸುವ ಸಂಬಂಧ ಶಾಸಕಿ ಶಾರದಾ ಪೂರ‌್ಯಾನಾಯ್ಕಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಪ್ರಭುಲಿಂಗ ಕವಳಿಕಟ್ಟಿ, ಸತ್ಯನಾರಾಯಣ ಇತರರಿದ್ದರು.
ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ವಿತರಿಸುವ ಸಂಬಂಧ ಶಾಸಕಿ ಶಾರದಾ ಪೂರ‌್ಯಾನಾಯ್ಕಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಪ್ರಭುಲಿಂಗ ಕವಳಿಕಟ್ಟಿ, ಸತ್ಯನಾರಾಯಣ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಲವಗೊಪ್ಪದಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ
  • ಪರಿಹಾರ ವಿತರಣೆಯಲ್ಲಿ ವಿಳಂಬವಾಗದಂತೆ ಪ್ರಕ್ರಿಯೆ ತ್ವರಿತಗೊಳಿಸಿ
  • ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ‌್ಯಾನಾಯ್ಕಾ ಸೂಚನೆ
ಶಿವಮೊಗ್ಗ: ಮಲವಗೊಪ್ಪ(Malavagoppa

)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ(National Highway Widening) ಕಾಮಗಾರಿ ಹಿನ್ನೆಲೆಯಲ್ಲಿ ಭೂಮಿ ಮತ್ತು ಆಸ್ತಿ ಕಳೆದುಕೊಳ್ಳುವ ಜಾಗದ ಮಾಲೀಕರಿಗೆ ನ್ಯಾಯಸಮ್ಮತ ಹಾಗೂ ಸೂಕ್ತ ಪರಿಹಾರ ಒದಗಿಸಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ‌್ಯಾನಾಯ್ಕಾ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ತಾಲೂಕು ಆಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಜತೆ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿ, ಭೂಸ್ವಾಧೀನ ಪ್ರಕ್ರಿಯೆ(Land acquisition process) ಹಾಗೂ ಪರಿಹಾರ ವಿತರಣೆ ಕುರಿತು ಸಮಗ್ರ ಚರ್ಚೆ ನಡೆಸಿದ ಅವರು, ರಸ್ತೆ ಅಭಿವೃದ್ಧಿ ಕಾಮಗಾರಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಅಗತ್ಯವಾಗಿದ್ದರೂ ಜಮೀನು ಹಾಗೂ ಆಸ್ತಿ ಕಳೆದುಕೊಳ್ಳುತ್ತಿರುವ ಭೂಮಾಲೀಕರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಪರಿಹಾರ ವಿತರಣೆ(Compensation distribution)ಯಲ್ಲಿ ವಿಳಂಬವಾಗದಂತೆ ಅಗತ್ಯ ದಾಖಲೆಗಳ ಪರಿಶೀಲನೆ ಹಾಗೂ ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು. ಸಾರ್ವಜನಿಕರ ಅಹವಾಲು(Public appeal)ಗಳಿಗೆ ಆದ್ಯತೆ ನೀಡಿ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಬೇಕು. ಸ್ಥಳೀಯರ ಹಿತಾಸಕ್ತಿ  ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ, ತಹಸೀಲ್ದಾರ್ ಎಸ್.ವಿ.ರಾಜೀವ್, ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net