ಬರ ಪೀಡಿತ ತಾಲೂಕಿನ ರೈತರಿಗೆ ಜೀವನಾಂಶ ಕೊಡಿ I drought taluk farmars

ಸಿದ್ದಲಿಂಗಪ್ಪ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ
ಸಿದ್ದಲಿಂಗಪ್ಪ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ
Published on

ಪ್ರಮುಖ ಮುಖ್ಯಾಂಶಗಳು

  • ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಸಿದ್ದಲಿಂಗಪ್ಪ ಆಗ್ರಹ
  • ಬರ ಪೀಡಿತ ತಾಲೂಕು ಘೋಷಣೆಯಲ್ಲಿ ಲೋಪ ಎಂಬ ಆರೋಪ
ಶಿವಮೊಗ್ಗ: ಬರ (drought) ಪೀಡಿತ ತಾಲೂಕಿನ ರೈತರಿಗೆ (farmars) ಜೀವನಾಂಶದ ಬಾಬ್ತು ಒಂದು ವರ್ಷದವರೆಗೆ ಮಾಸಿಕ 10 ಸಾವಿರ ರೂ. ನೀಡಬೇಕು. ರಾಜ್ಯದ ಎಲ್ಲ ರೈತರ ಸಾಲ ಮನ್ನಾ ಮಾಡಬೇಕು ಎಂದು ಬಿಜೆಪಿ (bjp) ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಸಿದ್ದಲಿಂಗಪ್ಪ ನಿಂಬೆಗೊಂದಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯ ಸರ್ಕಾರ 101 ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿದೆ. ಆದರೆ ಭೀಕರ ಬರಪೀಡಿತ ಕಲಬುರಗಿ, ಬೀದರ್, ಹಾವೇರಿ ಜಿಲ್ಲೆ ಹಾಗೂ ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವನ್ನು ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
ಸಂವೇದನೆಯನ್ನೇ ಕಳೆದುಕೊಂಡ ಸರ್ಕಾರ ರೈತ ವಿರೋಧಿಯಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಜಿಲ್ಲೆಯ ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಿದ್ದರು. ಬಿಜೆಪಿ ನಾಯಕರು ಬರಪ್ರದೇಶಗಳ ಸಮೀಕ್ಷೆ ನಡೆಸಿ ವರದಿ ನೀಡಿದ್ದರು. ಸರ್ಕಾರ ಯಾವ ಮಾನದಂಡದಲ್ಲಿ ಬರಪೀಡಿತ ತಾಲೂಕುಗಳ ಘೋಷಣೆ ಮಾಡಿದೆ ಎಂಬುದನ್ನು ಸ್ಪಷ್ಟಪಡಿಸುವಂತೆ ಆಗ್ರಹಿಸಿದರು.
ಬರ ಪೀಡಿತ ತಾಲೂಕುಗಳ ಘೋಷಣಾ ಪಟ್ಟಿಯನ್ನು ಮರು ಪರಿಶೀಲಿಸಬೇಕು. ಮುಂದಿನ ದಿನಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಎದುರಾಗಲಿದೆ. ನೀರಿನ ಮೇಲೆ ಅವಲಂಬಿತ ಬೆಳೆ ಬೆಳೆಯಬೇಡಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರಿಗೆ ಸಲಹೆ ನೀಡಿರುವುದು ಬಾಲಿಶವಾಗಿದೆ. ಜಿಲ್ಲೆಯಲ್ಲಿ ಮಳೆ ಮಾಪನ ಕೇಂದ್ರಗಳ ಸಂಪೂರ್ಣ ದುರಸ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಆದರೆ ಬೆಳೆ ವಿಮೆ ಸಮರ್ಪಕವಾಗಿ ರೈತರ ಕೈ ಸೇರಿಲ್ಲ ಎಂದು ದೂರಿದರು.
ಪ್ರಮುಖರಾದ ಗಣೇಶ್ ಬಿಳಕಿ, ಕುಮಾರ ನಾಯ್ಡು, ರುದ್ರೇಶ್, ಕಿರಣ, ಮಂಜುನಾಥ, ಚಂದ್ರಶೇಖರ ಸುದ್ದಿಗೋಷ್ಠಿಯಲ್ಲಿದ್ದರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net