ವಿಐಎಸ್‌ಎಲ್ ಕ್ರಿಯಾಯೋಜನೆ ಮಾಹಿತಿ ಕೊಡಿ | VISL

ವಿಐಎಸ್‌ಎಲ್ ಕಾರ್ಖಾನೆ ಅಭಿವೃದ್ಧಿಗೊಳಿಸುವ ಸಂಬಂಧ ಅಧಿಕಾರಿಗಳೊಂದಿಗೆ ಸಿರಿಗೆರೆ ತರಳಬಾಳು ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಭದ್ರಾವತಿ ತಾಲೂಕಿನ ಬಾಳೆಮಾರನಹಳ್ಳಿಯಲ್ಲಿ ಚರ್ಚೆ ನಡೆಸಿದರು. ಅನೂಪ್‌ಕುಮಾರ್, ವಿಶ್ವನಾಥ್, ತೀರ್ಥಯ್ಯ, ಮಂಗೋಟೆ ರುದ್ರೇಶ್ ಇತರರಿದ್ದರು.
ವಿಐಎಸ್‌ಎಲ್ ಕಾರ್ಖಾನೆ ಅಭಿವೃದ್ಧಿಗೊಳಿಸುವ ಸಂಬಂಧ ಅಧಿಕಾರಿಗಳೊಂದಿಗೆ ಸಿರಿಗೆರೆ ತರಳಬಾಳು ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಭದ್ರಾವತಿ ತಾಲೂಕಿನ ಬಾಳೆಮಾರನಹಳ್ಳಿಯಲ್ಲಿ ಚರ್ಚೆ ನಡೆಸಿದರು. ಅನೂಪ್‌ಕುಮಾರ್, ವಿಶ್ವನಾಥ್, ತೀರ್ಥಯ್ಯ, ಮಂಗೋಟೆ ರುದ್ರೇಶ್ ಇತರರಿದ್ದರು.
Published on
ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಗೊಳಿಸುವ ಸಂಬಂಧ ಸಿರಿಗೆರೆ ತರಳಬಾಳು ಬೃಹನ್ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಕಾರ್ಖಾನೆಯ ಅಧಿಕಾರಿಗಳು ಹಾಗೂ ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳೊಂದಿಗೆ ಬುಧವಾರ ಚರ್ಚೆ ನಡೆಸಿದರು.
ತಾಲೂಕಿನ ಬಾಳೆಮಾರನಹಳ್ಳಿಯಲ್ಲಿ ಕಾರ್ಖಾನೆ ಅಭಿವೃದ್ಧಿಗೊಳಿಸಲು ಸಾಧ್ಯವಿರುವ ರೂಪುರೇಷೆಗಳ ಕುರಿತ ಯೋಜನಾ ವರದಿಯ ಸಮಗ್ರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಈ ಸಂಬಂಧ ಚರ್ಚಿಸುವುದಾಗಿ ಭರವಸೆ ನೀಡಿದರು.
ಗುತ್ತಿಗೆ ಕಾರ್ಮಿಕರು ಯಾವುದೇ ರೀತಿ ಆತಂಕಕ್ಕೆ ಒಳಗಾಗಬಾರದು. ಈಗಾಗಲೇ ಹುಣ್ಣಿಮೆ ಮಹೋತ್ಸವಕ್ಕೆ ಆಗಮಿಸಿದ್ದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಾರ್ಖಾನೆ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಾರ್ಖಾನೆಗೆ ಉತ್ತಮ ಭವಿಷ್ಯವಿದೆ ಎಂದರು.
ತರಳಬಾಳು ಹುಣ್ಣಿಮೆ ಮಹೋತ್ಸವ ಜರುಗಿದ ವಿಐಎಸ್‌ಎಲ್ ಹೆಲಿಪ್ಯಾಡ್ ಮತ್ತು ಸುತ್ತಮುತ್ತಲಿನ ಜಾಗವನ್ನು ಮೊದಲು ರಕ್ಷಿಸಿಕೊಳ್ಳಿ. ಯಾರೂ ಸಹ ಒತ್ತುವರಿ ಮಾಡದಂತೆ ಎಚ್ಚರವಹಿಸಿ. ಈ ಜಾಗ ಇತಿಹಾಸದ ಪುಟಗಳಲ್ಲಿ ಉಳಿಯುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಅಭಿವೃದ್ಧಿಗೊಳಿಸಿ ಎಂದು ಭಕ್ತರಿಗೆ ಸಲಹೆ ನೀಡಿದರು.
ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಅನೂಪ್‌ಕುಮಾರ್, ಮುಖ್ಯ ಮಹಾಪ್ರಬಂಧಕ ವಿಶ್ವನಾಥ್, ಪ್ರಮುಖರಾದ ತೀರ್ಥಯ್ಯ, ಮಂಗೋಟೆ ರುದ್ರೇಶ್, ಸಂಜೀವಕುಮಾರ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಜಿ.ಸುರೇಶ್, ಪದಾಧಿಕಾರಿಗಳಾದ ಮಂಜುನಾಥ್, ಶ್ರೀನಿವಾಸ್, ರಾಕೇಶ್, ಕೇಶವಮೂರ್ತಿ, ನವೀನ್, ಬಾಬು, ಅಕ್ಷಯ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net