ಪರಿಶಿಷ್ಟರ ಮೀಸಲಾತಿ ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪು ಮರಣ ಶಾಸನ Scheduled Castes Reservations

ಶಿವಮೊಗ್ಗ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಒಬಿಸಿ ಸಮುದಾಯಗಳಿಗೆ ಹೆಚ್ಚಳ ಮಾಡಿದ್ದ ಮೀಸಲಾತಿಯನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪು ಮರಣ ಶಾಸನವಾಗಿದೆ. ಆ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ತಕ್ಷಣವೇ ಎಸ್‌ಎಲ್‌ಪಿ(ವಿಶೇಷ ಮೇಲ್ಮನವಿ ಅರ್ಜಿ) ಸಲ್ಲಿಸಬೇಕು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಒತ್ತಾಯಿಸಿದರು.
Scheduled Castes Reservations
ಮಾಜಿ ಸಂಸದ ವಿ.ಎಸ್.ಉಗ್ರಪ್ಪ
Published on: 

ಶಿವಮೊಗ್ಗ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಒಬಿಸಿ ಸಮುದಾಯಗಳಿಗೆ ಹೆಚ್ಚಳ ಮಾಡಿದ್ದ ಮೀಸಲಾತಿಯನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪು ಮರಣ ಶಾಸನವಾಗಿದೆ. ಆ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ತಕ್ಷಣವೇ ಎಸ್‌ಎಲ್‌ಪಿ(ವಿಶೇಷ ಮೇಲ್ಮನವಿ ಅರ್ಜಿ) ಸಲ್ಲಿಸಬೇಕು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಒತ್ತಾಯಿಸಿದರು.

ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಕಾಯ್ದೆಯ ನಿಬಂಧನೆಗಳನ್ನು ಹೈಕೋರ್ಟ್ ರದ್ದುಪಡಿಸಿರುವುದರಿಂದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಬಗ್ಗೆ ಆತಂಕ ಉಂಟಾಗಿದೆ. ಹಾಗಾಗಿ ಮೀಸಲಾತಿ ಕಾಯ್ದೆಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ರಾಜ್ಯ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ದೆಹಲಿಗೆ ಕರೆದೊಯ್ಯಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

2022ರಿಂದ 2025ರವರೆಗೆ ಈ ಕಾಯ್ದೆಯಡಿ ಅನೇಕರು ವೈದ್ಯಕೀಯ, ಇಂಜಿನಿಯರಿಂಗ್, ಕಾನೂನು, ನರ್ಸಿಂಗ್ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದಾರೆ. ವಿವಿಧ ಇಲಾಖೆಗಳಲ್ಲಿ ಉದ್ಯೋಗಾವಕಾಶವನ್ನೂ ಪಡೆದಿದ್ದಾರೆ. ಅಲ್ಲದೆ ಇದು ಈಗಾಗಲೇ ನೋಟಿಫಿಕೇಶನ್ ಹೊರಡಿಸಿರುವ 72 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮೇಲೂ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಕುರಿತು ಅಂದಿನ ರಾಜ್ಯ ಸರ್ಕಾರ 2023ರ ಮಾ.23ರಂದು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026ರ ಏ.16ರಂದು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ವಿಧಾನಮಂಡಲದ ಉಭಯ ಸದನಗಳಲ್ಲೂ ನಿರ್ಣಯ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿಗಳು ನ.15ರಂದು ಬೆಂಗಳೂರಿಗೆ ಭೇಟಿ ನೀಡುವ ಮುನ್ನ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನ ತೀವ್ರಗೊಳಿಸಿ ಪ್ರಧಾನ ಮಂತ್ರಿಗಳ ಭೇಟಿ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಸಮಾನ ಮನಸ್ಕರ ವೇದಿಕೆ ಕಾರ್ಯಾಧ್ಯಕ್ಷ ನರಸಿಂಹರಾಜು, ಲಕ್ಷ್ಮಣಪ್ಪ, ವೀರಪ್ಪ, ಹನುಮಂತಯ್ಯ, ರಾಜಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

ರಾಜ್ಯದಲ್ಲಿ ಸಾಮಾಜಿಕ ನ್ಯಾಯಕ್ಕೆ ಗ್ರಹಣ ಹಿಡಿದಿದೆ. ಈ ಸಮಾಜದಲ್ಲಿ ಆಳುವ ವರ್ಗ ಮತ್ತು ಶೋಷಿತ ವರ್ಗ ಎಂಬ ಎರಡು ವರ್ಗಗಳಿವೆ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಇಲ್ಲದಂತಾಗಿದೆ. ಸಂವಿಧಾನಬಾಹಿರ, ಸಾಮಾಜಿಕ ನ್ಯಾಯದ ವಿರುದ್ಧವಾದ ಆದೇಶದಿಂದ ಹಿಂದುಳಿದ ವರ್ಗಗಳಿಗೆ ತುಂಬಲಾರದ ನಷ್ಟವಾಗಿದೆ.
ವಿ.ಎಸ್.ಉಗ್ರಪ್ಪ,ಮಾಜಿ ಸಂಸದ