27ಕ್ಕೆ ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ I job faire

ಶಿವಮೊಗ್ಗದಲ್ಲಿ ಏರ್ಪಡಿಸಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಪೋಸ್ಟರ್ ಅನ್ನು ಡಿಸಿ ಪ್ರಭುಲಿಂಗ ಕವಳಿಕಟ್ಟಿ ಹಾಗೂ ಎನ್.ಹೇಮಂತ್ ಬಿಡುಗಡೆ ಮಾಡಿದರು. ಜಯಲಕ್ಷ್ಮೀ, ವಿ.ಅಭಿಷೇಕ್ ಇದ್ದರು.
ಶಿವಮೊಗ್ಗದಲ್ಲಿ ಏರ್ಪಡಿಸಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಪೋಸ್ಟರ್ ಅನ್ನು ಡಿಸಿ ಪ್ರಭುಲಿಂಗ ಕವಳಿಕಟ್ಟಿ ಹಾಗೂ ಎನ್.ಹೇಮಂತ್ ಬಿಡುಗಡೆ ಮಾಡಿದರು. ಜಯಲಕ್ಷ್ಮೀ, ವಿ.ಅಭಿಷೇಕ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿವಿಧ ವಲಯದ ಕಂಪನಿಗಳು ಬಾಗಿ
  • ಉಚಿತ ನೋಂದಣಿಗೆ ಅವಕಾಶ
ಶಿವಮೊಗ್ಗ: ನಗರದ ಕುವೆಂಪು ರಂಗ ಮಂದಿರದ ಪಕ್ಕದಲ್ಲಿರುವ ಎಟಿಎನ್‌ಸಿ (atnc) ಕಾಲೇಜು (college) ಆವರಣದಲ್ಲಿ ಫೆ.27ರ ಬೆಳಗ್ಗೆ 10.30ಕ್ಕೆ ಜಿಲ್ಲಾ ಮಟ್ಟದ ಉದ್ಯೋಗ (employment) ಮೇಳ ಆಯೋಜಿಸಲಾಗಿದೆ. ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳು ಇದರಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳುವಂತೆ ಜಿಪಂ ಸಿಇ ಎನ್.ಹೇಮಂತ್ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರೊಂದಿಗೆ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಿಂದ 50ಕ್ಕೂ ಹೆಚ್ಚು ಕಂಪನಿಗಳ ಮುಖ್ಯಸ್ಥರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ ಎಂದರು.
ಎಸ್‌ಎಸ್‌ಎಲ್‌ಸಿ ಉತ್ತೀರ್ಣ/ಅನುತ್ತೀರ್ಣ, ಪಿಯುಸಿ, ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಪೂರೈಸಿದ ಯುವಕ ಯುವತಿಯರು ಭಾಗವಹಿಸಬಹುದು. ಉಚಿತ ಪ್ರವೇಶ ಕಲ್ಪಿಸಲಾಗಿದೆ. ಮಾಹಿತಿ ತಂತ್ರಜ್ಞಾನ, ಕಂಪ್ಯೂಟರ್, ಆಟೋಮೊಬೈಲ್, ಉತ್ಪಾದಕ ಕಂಪನಿಗಳು, ನರ್ಸಿಂಗ್, ಬ್ಯಾಂಕಿಂಗ್, ವಿಮೆ ಮುಂತಾದ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ. ಅಭ್ಯರ್ಥಿಗಳ ಅರ್ಹತೆಗೆ ತಕ್ಕನಾಗಿ ಅವಕಾಶಗಳು ಸಿಗಲಿವೆ ಎಂದು ಹೇಳಿದರು.
ಇಂಟರ್ನ್‌ಶಿಪ್ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಸಹ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸ್ವವಿವರ, ಭಾವಚಿತ್ರ, ಆಧಾರ್ ಕಾರ್ಡ್, ಶೈಕ್ಷಣಿಕ ವಿದ್ಯಾರ್ಹತೆ ಪ್ರಮಾಣಪತ್ರ ಹಾಗೂ ಅವುಗಳ ಐದು ಜೆರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬೇಕು. ಆನ್‌ಲೈನ್ ಮೂಲಕ ಹಾಗೂ ಉದ್ಯೋಗ ಮೇಳ ನಡೆಯುವ ಸ್ಥಳದಲ್ಲೂ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಮಾಹಿತಿಗೆ ಜಿಪಂನ ಎನ್‌ಆರ್‌ಎನ್‌ಎಂ ಘಟಕವನ್ನು ಸಂಪರ್ಕಿಸಬಹುದು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net