ಮಳೆಗಾಲದ ನಂತರ ಹುಲಿಕಲ್ ಕಾಮಗಾರಿ | Ghat road work

ಹುಲಿಕಲ್ ಘಾಟ್ ರಸ್ತೆ ಕಾಮಗಾರಿಯನ್ನು ಪಿಡಬ್ಲುೃಡಿ ಸಚಿವ ಜಾರಕಿಹೊಳಿ ವೀಕ್ಷಿಸಿದರು. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇತರರಿದ್ದರು.
ಹುಲಿಕಲ್ ಘಾಟ್ ರಸ್ತೆ ಕಾಮಗಾರಿಯನ್ನು ಪಿಡಬ್ಲುೃಡಿ ಸಚಿವ ಜಾರಕಿಹೊಳಿ ವೀಕ್ಷಿಸಿದರು. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇತರರಿದ್ದರು.
Published on
ಹೊಸನಗರ: ಹುಲಿಕಲ್ ಘಾಟ್‌ನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಮಳೆಗಾಲದ ನಂತರ ಪೂರ್ಣ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಹುಲಿಕಲ್ ಘಾಟಿಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿ ಮಾತನಾಡಿದ ಅವರು, ಈ ಯೋಜನೆ ಇಲಾಖೆಗೆ ಸವಾಲಿನ ಕೆಲಸವಾಗಿದ್ದು, ಪದೇಪದೆ ಅಪಘಾತಗಳು ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಂಡಿದೆ ಎಂದರು.
ಮಳೆಗಾಲದ ಕಾರಣದಿಂದ ಕಾಮಗಾರಿ ಮುಗಿಸಲು ಸಾಧ್ಯವಾಗಿಲ್ಲ. ಈಗಾಗಲೇ ಭಾರಿ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಸರಕು ಸಾಗಣೆಯ ಖಾಲಿ ವಾಹನಗಳ ಸಂಚಾರಕ್ಕೂ ಜಿಲ್ಲಾಧಿಕಾರಿ ಅನುಮತಿ ಪಡೆದು ಅವಕಾಶ ಕಲ್ಪಿಸುವ ಬಗ್ಗೆ ಪರಿಶೀಲಿಸಲಾಗುವುದು. ಈಗ ನಡೆಯುತ್ತಿರುವ ಕಾಮಗಾರಿಯಿಂದ ಸಮಸ್ಯೆ ಪರಿಹಾರವಾಗಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಹಸಿರುಮಕ್ಕಿ ಸೇತುವೆ ಕಾಮಗಾರಿ ಅಂತಿಮ ಹಂತದಲ್ಲಿದೆ. ಒಂದೆರಡು ತಿಂಗಳೊಳಗೆ ಸೇತುವೆ ಪೂರ್ಣವಾಗುವ ನಿರೀಕ್ಷೆಯಿದೆ. ಹಾಗೆಯೇ ರಾಜ್ಯಾದ್ಯಂತ ಸ್ಥಗಿತಗೊಂಡಿರುವ ಸಾರ್ವಜನಿಕ ಕಾಮಗಾರಿಗಳನ್ನು ಶೀಘ್ರ ಮುಗಿಸುವು ಮೊದಲ ಆದ್ಯತೆಯಾಗಿದೆ. ಸಾರ್ವಜನಿಕರು ಹಾಗೂ ಅಧಿಕಾರಿಗಳಿಂದ ಉತ್ತಮ ಸಲಹೆಗಳು ಬಂದರೆ ಅವುಗಳನ್ನು ಅನುಷ್ಠಾನಗೊಳಿಸಲು ಇಲಾಖೆ ಸಂಪೂರ್ಣ ಸಿದ್ಧವಿದೆ ಎಂದು ಹೇಳಿದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಹೆದ್ದಾರ ಪ್ರಾಧಿಕಾರದ ಅಧಿಕಾರಿಗಳಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net