ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುವೆ | Minister Madhu Bangarappa

ಸಚಿವ ಮಧು ಬಂಗಾರಪ್ಪ
ಸಚಿವ ಮಧು ಬಂಗಾರಪ್ಪ
Published on

ಪ್ರಮುಖ ಮುಖ್ಯಾಂಶಗಳು

  • ಸಿಎಂ ಡಿ.ಕೆ.ಶಿವಕುಮಾರ್ ನನ್ನ ಸಹೋದರ ಸಮಾನರು
  • ತಂದೆ ಮೇಲಿನ ಗೌರವದಿಂದ ಸಂಪುಟದಲ್ಲಿ ಅವಕಾಶ
  • ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿಕೆ
ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(Chief Minister DK Shivakumar

) ನನ್ನ ಸಹೋದರ ಸಮಾನರು. ಅವರಿಗೆ ನಮ್ಮ ತಂದೆ, ಮಾಜಿ ಸಿಎಂ ಎಸ್.ಬಂಗಾರಪ್ಪ ಅವರ ಮೇಲೆ ಅಪಾರ ಗೌರವ ಇರುವ ಕಾರಣ ಸಂಪುಟದಲ್ಲಿ ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ(Minister Madhu Bangarappa) ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಗಾರಪ್ಪ ಅವರ ಕಾಲದಿಂದಲೂ ನಮ್ಮ ಹಾಗೂ ಡಿ.ಕೆ.ಶಿವಕುಮಾರ್ ಕುಟುಂಬದ ನಡುವೆ ಆತ್ಮೀಯ ಬಾಂಧವ್ಯವಿದ್ದು ಕಾಂಗ್ರೆಸ್ ಹೈಕಮಾಂಡ್(Congress High Command

) ನನ್ನ ಮೇಲೆ ವಿಶ್ವಾಸ ಇಟ್ಟು ಸಂಪುಟದಲ್ಲಿ ಸಚಿವ ಸ್ಥಾನ ನೀಡಿದೆ ಎಂದರು.

ಈ ಹಿಂದೆ ಸಚಿವನಾಗಿದ್ದಾಗ ಯಾವುದೇ ನಿರೀಕ್ಷೆ ಇಲ್ಲದೆ ಶಿಕ್ಷಣ ಖಾತೆ ನೀಡಿದ್ದರು. ಈ ಬಾರಿಯೂ ಯಾವುದೇ ನಿರೀಕ್ಷೆಗಳಿಲ್ಲ. ಶಿಕ್ಷಣ ಖಾತೆ ಸಹಿತ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ನಾನು ಮೊದಲ ಬಾರಿ ಸಚಿವನಾಗಿದ್ದಾಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ವಿಚಾರವಾಗಿ ಎಲ್ಲ ರೀತಿಯ ಸಹಕಾರವನ್ನು ಕಾಂಗ್ರೆಸ್  ಕಾರ್ಯಕರ್ತರು(Congress workers) ನೀಡಿದ್ದರು. ಈ ಬಾರಿಯೂ ಅಂತಹದ್ದೆ ಸಹಕಾರವನ್ನು ಅವರಿಂದ ಬಯಸುತ್ತಿದ್ದೇನೆ ಎಂದು ಹೇಳಿದರು.
ಕೆಲ ಸಚಿವರು ರಾಜೀನಾಮೆ ನೀಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ವರಿಷ್ಠರ ನಿರ್ಧಾರ(Decision of the superiors)ಕ್ಕೆ ನಾವು ಬದ್ಧರಾಗಿರುತ್ತೇವೆ. ಪಕ್ಷ ಹಾಗೂ ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾಯಕರ ಆಯ್ಕೆ ಮತ್ತು ಬೇಡಿಕೆಗಳ ಕುರಿತು ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಸಂಪುಟದ ಗೊಂದಲಗಳ ಬಗ್ಗೆ ನನಗೆ ಮಾಹಿತಿ ಇಲ್ಲ. ಸೋಮವಾರದ ವೇಳೆಗೆ ಖಾತೆ ಹಂಚಿಕೆ ಆಗಬಹುದು. ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಬಿ.ಕೆ.ಸಂಗಮೇಶ್ವರ್ ಕೂಡ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದರು. ಆದರೆ ಅವರಿಬ್ಬರಿಗೂ ಸಚಿವ ಸ್ಥಾನ ದೊರಕಿಲ್ಲ. ಇದರಿಂದ ಸಹಜವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದರು.
ಇದೇ ವೇಳೆ ಮಧು ಬಂಗಾರಪ್ಪ ಅವರಿಗೆ ಮತ್ತೆ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ಸಂತೋಷವಾಗಿದೆ ಎಂಬ ಸಹೋದರ ಕುಮಾರ್ ಬಂಗಾರಪ್ಪ ಹೇಳಿಕೆ ಹಿನ್ನೆಲೆಯಲ್ಲಿ ಅವರಿಗೆ ದೇವರು ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿದರು.

ಕಾಂಗ್ರೆಸ್-ಬಿಜೆಪಿ ನಡುವೆ ಹೋಲಿಕೆ ಬೇಡ

ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ಜತೆ ಹೋಲಿಕೆ ಬೇಡ. ಬಿ.ಎಸ್.ಯಡಿಯೂರಪ್ಪ(B.S.Yediyurappa) ಅವರು ಸಿಎಂ ಆಗಿದ್ದಾಗ ಅನೇಕ ಯೋಜನೆಗಳಲ್ಲಿ ಎಷ್ಟೋ ದಿನ ವಿಳಂಬವಾಗಿತ್ತು. ಹಾಗಾಗಿ ನಮ್ಮ ಸರ್ಕಾರವನ್ನು ಅವರ ಜತೆ ಹೋಲಿಸಲು ಹೋಗಲ್ಲ ಎಂದ ಅವರು, ಶಿಕ್ಷಣ ಇಲಾಖೆಯ ಕೆಲಸಗಳು ಮುಂದುವರಿಯಲಿವೆ. ಶಿಕ್ಷಣ ಸಚಿವರಾಗಿದ್ದಾಗ ಕೈಗೆತ್ತಿಕೊಂಡಿದ್ದ ಅಭಿವೃದ್ಧಿ ಕೆಲಸಗಳು ಈ ಸರ್ಕಾರದಲ್ಲೂ ನಿರಂತರವಾಗಿ ಮುಂದುವರಿಯಲಿವೆ. ಸಿಎಂ ಕೂಡ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದ್ದು ಸ್ವತಃ ಶಿಕ್ಷಣ ಕ್ಷೇತ್ರದ ಬಗ್ಗೆ ವಿಶೇಷ ಕಾಳಜಿ ಮತ್ತು ಆಸಕ್ತಿ ಹೊಂದಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು.

ಮಳೆ ಕೊರತೆ ಬಗ್ಗೆ ಆಗಸ್ಟ್ ಅಂತ್ಯಕ್ಕೆ ಚಿತ್ರಣ

ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವವಿಲ್ಲ. ಜಿಲ್ಲೆಯ ಪ್ರವಾಸದ ವೇಳೆ ಪರಿಶೀಲಿಸಿದಂತೆ ಸದ್ಯಕ್ಕೆ ಕುಡಿಯುವ ನೀರಿನ ಅಭಾವ ಅಥವಾ ಟ್ಯಾಂಕರ್ ನೀರಿನ ಕೊರತೆ ಎದ್ದು ಕಾಣುತ್ತಿಲ್ಲ. ಮಳೆ ಅಭಾವ(Rainfall)ದ ಕುರಿತು ಆಗಸ್ಟ್ ಕೊನೆಯಲ್ಲಿ ಪರಿಪೂರ್ಣ ಮತ್ತು ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
"

ಸಂಪುಟ ಸಭೆಯ ನಿರ್ದೇಶನದಂತೆ ಬರ ಹಾಗೂ ಅತಿವೃಷ್ಟಿ ಪರಿಶೀಲನೆಗೆ ಆದ್ಯತೆ ನೀಡುತ್ತೇನೆ. ಈಗಾಗಲೇ ಶಿವಮೊಗ್ಗ ಗ್ರಾಮಾಂತರ, ನಗರ ಹಾಗೂ ಶಿಕಾರಿಪುರ ಪ್ರವಾಸ ಮುಗಿಸಿದ್ದೇನೆ. ಭಾನುವಾರ ತೀರ್ಥಹಳ್ಳಿ ಸೇರಿ ಇತರ ತಾಲೂಕುಗಳಿಗೆ ಭೇಟಿ ನೀಡುತ್ತೇನೆ.

— ಮಧು ಬಂಗಾರಪ್ಪ, ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net