ವೀರಶೈವ ಧರ್ಮದಲ್ಲಿ ಜ್ಞಾನ ದಾಸೋಹಕ್ಕೆ ಮಹತ್ವ | Religion ceremony
ಶಿರಾಳಕೊಪ್ಪ ಸಮೀಪದ ಕಡೆನಂದಿಹಳ್ಳಿಯಲ್ಲಿ ಆಯೋಜಿಸಿದ್ದ ಧರ್ಮ ಸಮಾರಂಭದಲ್ಲಿ ಗುರು ಪಟ್ಟಾಧಿಕಾರ ವಹಿಸಿಕೊಂಡ ರೇವಣಸಿದ್ದೇಶ್ವರ ಸ್ವಾಮೀಜಿ ಅವರನ್ನು ಶ್ರೀ ರಂಭಾಪುರಿ ಜಗದ್ಗುರುಗಳು ಆಶೀರ್ವದಿಸಿದರು. ಶ್ರೀ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಇತರರಿದ್ದರು.
Published on:
Copied
Follow Us
ಶಿರಾಳಕೊಪ್ಪ: ಸಾಧನೆಯ ಪಥದಲ್ಲಿ ಗುರು ಮತ್ತು ಸ್ಪಷ್ಟ ಗುರಿ ಇದ್ದಾಗ ಬದುಕು ಸಮೃದ್ಧವಾಗುತ್ತದೆ ಎಂದು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.
ತಾಲೂಕಿನ ಕಡೆನಂದಿಹಳ್ಳಿಯ ರಂಭಾಪುರಿ ಶಾಖಾಮಠದಲ್ಲಿ ಆಯೋಜಿಸಿದ್ದ ಶ್ರೀಗುರು ಪಟ್ಟಾಧಿಕಾರ ಧರ್ಮ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ಬಾಳೆಗೆೊಂದು ಗೊನೆ ಇರುವಂತೆ ಬಾಳಿಗೊಂದು ಗುರಿ ಇರಬೇಕು. ವೀರಶೈವ ಧರ್ಮದಲ್ಲಿ ಜ್ಞಾನ ಮತ್ತು ಕ್ರಿಯಾತ್ಮಕ ಬೋಧನೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರೇಕೆರೂರು ಶಾಸಕ ಯು.ಬಿ.ಬಣಕಾರ, ವೀರಶೈವ ಧರ್ಮವು ಸಮಾಜದ ಒಳಿತಿಗಾಗಿ ಸದಾ ಶ್ರಮಿಸುತ್ತಿದೆ. ಪಂಚಪೀಠಗಳು ಧರ್ಮ ಮತ್ತು ಸಂಸ್ಕೃತಿಯ ಚಿಂತನೆಗಳನ್ನು ಜನರಿಗೆ ತಲುಪಿಸುತ್ತಿವೆ ಎಂದರು.
ನೂತನ ಪಟ್ಟಾಧ್ಯಕ್ಷರಾದ ಶ್ರೀ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಬದುಕು ಬದಲಾಗಬೇಕಾದರೆ ಬದುಕುವ ದಾರಿ ಬದಲಾಗಬೇಕು. ಸತ್ಯ, ಧರ್ಮ ಮತ್ತು ಸಂಸ್ಕೃತಿಯ ಬೆಳವಣಿಗೆಯಲ್ಲಿ ಮನುಷ್ಯನ ಕಲ್ಯಾಣ ಅಡಗಿದೆ ಎಂದು ಹೇಳಿದರು.
ಚನ್ನಗಿರಿ, ತೊಗರ್ಸಿ, ಹಾರನಹಳ್ಳಿ, ರಟ್ಟಿಹಳ್ಳಿ, ನಾಗವಂದ, ಹೊನ್ನಾಳಿ ಸೇರಿ ವಿವಿಧ ಭಾಗಗಳಿಂದ 25ಕ್ಕೂ ಹೆಚ್ಚು ಶ್ರೀಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದ ನಂತರ ಅನ್ನದಾಸೋಹ ನಡೆಯಿತು.
ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಅಧ್ಯಕ್ಷ, ಸಿಂದಗಿ ಸಾರಂಗಮಠದ ಶ್ರೀ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ವೀರಶೈವ ಸಮಾಜದ ಮುಖಂಡ ಎನ್.ವಿ.ಈರೇಶ್ ಇತರರಿದ್ದರು.