ಶಿವಮೊಗ್ಗ: ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ(KSRTC Bus Station)ದಲ್ಲಿ ಯುವತಿ ಜತೆ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನನ್ನು ಅಕ್ಕ ಪಡೆ(Akka squad) ಪೊಲೀಸರು ವಶಕ್ಕೆ ಪಡೆದು ಲಘು ಪ್ರಕರಣ ದಾಖಲಿಸಿ ಬಿಟ್ಟಿದ್ದಾರೆ.
ಯುವಕ ಬಸ್ ನಿಲ್ದಾಣದಲ್ಲಿದ್ದ ಯುವತಿ ಜತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ. ಈ ಕುರಿತಂತೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಅದರ ಆಧಾರದ ಮೇಲೆ ಅಕ್ಕ ಪಡೆ ಪೊಲೀಸರು ಸ್ಥಳಕ್ಕೆ ತೆರಳಿ ಯುವಕನನ್ನು ವಶಕ್ಕೆ ಪಡೆದಿದ್ದರು.
ಈ ಸಂಬಂಧ ದೊಡ್ಡಪೇಟೆ ಪೊಲೀಸ್(Doddpet Police) ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಿ, ಆರೋಪಿತ ಯುವಕನಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.